ಬೆಂಗಳೂರು ;- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದು ಸಹ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವೆಡೆ ನಿನ್ನೆ ಭರ್ಜರಿ ಮಳೆಯಾಗಿತ್ತು ನಿನ್ನೆ ರಾತ್ರಿ ಬೆಂಗಳೂರಲ್ಲಿ ವರುಣ ಅಬ್ಬರಿಸಿದ್ದ.
ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸುರಿದ ಮಳೆಗೆ ವಾಹನಸವಾರರು ಪರದಾಡುವಂತಾಗಿತ್ತು. ಬೆಂಗಳೂರಲ್ಲಿ ಇಂದು ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅಕ್ಟೋಬರ್ 21ದರ ವರೆಗೂ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಸದ್ಯ ಸಿಲಿಕಾನ್ ಸಿಟಿ ಕೆಲವೆಡೆ ಮಲೆಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.
The post ಬೆಂಗಳೂರಿನಲ್ಲಿ ಭಾನುವಾರ ಅಬ್ಬರಿಸಿದ ವರುಣ, ಇಂದು ಕೂಡ ಮಳೆ ಸಾಧ್ಯತೆ appeared first on Ain Live News.
