Arrest of suspected terrorists in Bengaluru: Home Minister, CM praises CCB police for their work
ಬೆಂಗಳೂರು:
ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ವಿಚಾರವಾಗಿ ಸಿಸಿಬಿ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಸಂಭವಿಸಬಹುದಾಗಿದ್ದ
— CM of Karnataka (@CMofKarnataka) July 19, 2023
ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು.
ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ…
ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಉಗ್ರ ಬಂಧನ ಹಾಗೂ ಕಾರ್ಯಾಚರಣೆ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು, ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. ಬಂಧಿತರು ಈ ಹಿಂದೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ನಂತರ ಜಾಮೀನು ಮೇಲೆ ಹೊರಗೆ ಬಂದಿದ್ದರು. ನಂತರ ದೇಶದ್ರೋಹಿ ಸಂಘಟನೆಗಳ ಸಂಪರ್ಕಕ್ಕೆ ಬಂದಿದ್ದಾರೆಂದು ಹೇಳಿದರು.
ಬಂಧಿಕರು ಕರ್ನಾಟಕ ಹಾಗೂ ಇತರೆಡೆಗಳಲ್ಲಿ ಉಗ್ರ ಚಟುವಟಿಕೆಗಳನ್ನು ಕೈಗೊಳ್ಳಲು ಮುಂದಾಗಿದ್ದರು. ಶಂಕಿತರ ಸಂಭವನೀಯ ಉಗ್ರ ಚಟುವಟಿಕೆಗಳನ್ನು ಸಿಸಿಬಿ ಪೊಲೀಸರು ತಡೆದು ಬಂಧಿಸಿದ್ದಾರೆ. ಈ ಶಂಕಿತರು ಯಾವ ಉಗ್ರ ಚಟುವಟಿಕೆಗೆ ಉದ್ದೇಶಿಸಿದ್ದರು ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ ಎಂದು ತಿಳಿಸಿದರು.
