ಬೆಂಗಳೂರು: ಇಲ್ಲಿನ ಕುಂದಲಹಳ್ಳಿ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಸ್ಫೋಟದಲ್ಲಿ ಐವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಎಸಿಪಿ ರೀನಾ ಸುವರ್ಣ ಹಾಗೂ ಮಾರತ್ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಸ್ಫೋಟದಿಂದ ಹೋಟೆಲ್ನಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸಿಲಿಂಡರ್ ಸ್ಫೋಟಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.