Home Uncategorized ಬೆಂಗಳೂರು: ಅಪಾರ್ಟ್ ಮೆಂಟ್ ನ 10ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಅಪಾರ್ಟ್ ಮೆಂಟ್ ನ 10ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣು

23
0

ಅಪಾರ್ಟ್ ಮೆಂಟ್ ನಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶರ್ಮಾ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇಲ್ಲಿ ತನ್ನ ಅತ್ತೆಯೊಂದಿಗೆ ವಾಸವಿದ್ದ ಶರ್ಮಾ ಗುರುವಾರ ರಾತ್ರಿ 10ನೇ ಮಹಡಿಯಿಂದ ಜಿಗಿದಿದ್ದಾಳೆ. ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ಅಮೃತಾ ಶರ್ಮಾ (27) ಮೃತ ಯುವತಿ. ಕುಟುಂಬದ ಜೊತೆ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಯುವತಿ, ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಅಪಾರ್ಟ್ ಮೆಂಟ್ ನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶರ್ಮಾ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇಲ್ಲಿ ತನ್ನ ಅತ್ತೆಯೊಂದಿಗೆ ವಾಸವಿದ್ದ ಶರ್ಮಾ ಗುರುವಾರ ರಾತ್ರಿ 10ನೇ ಮಹಡಿಯಿಂದ ಜಿಗಿದಿದ್ದಾಳೆ.

ಇದನ್ನೂ ಓದಿ: ಚಾಮರಾಜನಗರ: ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಆಕೆ  ಸಾವನ್ನಪ್ಪಿದ್ದಾಳೆ ಎಂದು  ವೈದ್ಯರು ತಿಳಿಸಿದ್ದಾರೆ. ಅಮೃತಾ ಶರ್ಮಾ ಇತ್ತೀಚೆಗಷ್ಟೇ ತನ್ನ ತಂದೆಯನ್ನು ಕಳೆದುಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಲಕ್ನೋದಲ್ಲಿರುವ ಆಕೆಯ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಅವರು ಬೆಂಗಳೂರಿಗೆ ಬರುತ್ತಿದ್ದಾರೆ. ಅವರ ಕುಟುಂಬ ಸದಸ್ಯರ ಹೇಳಿಕೆಯನ್ನು ದಾಖಲಿಸಿದ ನಂತರ ಪ್ರಕರಣದಲ್ಲಿ ಹೆಚ್ಚಿನ ಸ್ಪಷ್ಟತೆ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here