ಬೆಂಗಳೂರಿನ ಕೆ.ಆರ್.ಪುರಂನಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ.
ಶುಕ್ರವಾರ ತಡರಾತ್ರಿ ನಡೆದ ಘಟನೆ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮೃತರನ್ನು ಫಾಜಿಲಾ ಮತ್ತು ತಸೀನಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಮತ್ತು ತಸೀನಾ ಅವರ ಪತಿ ಖಲೀದ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ.ಆರ್. ಪುರಂ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾಲಕನಿಗಾಗಿ ಶೋಧ ನಡೆಸಿದ್ದಾರೆ.