ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಡಿಐಜಿ, ಐಪಿಎಸ್ ಅಧಿಕಾರಿ ಆರ್. ದಿಲೀಪ್(53) ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ. ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಡಿಐಜಿ, ಐಪಿಎಸ್ ಅಧಿಕಾರಿ ಆರ್. ದಿಲೀಪ್(53) ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ.
ಇತ್ತೀಚಿಗೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ದಿಲೀಪ್ ಅವರು ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.
ಇದನ್ನು ಓದಿ: ಬೆಂಗಳೂರು: ಹೊಸ ವರ್ಷಾಚರಣೆಗೆ 14 ಸಾವಿರ ಖಾಕಿಗಳಿಂದ ಭದ್ರತೆ, ಮಧ್ಯರಾತ್ರಿ 1ರವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ
ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು.