Home ಕರ್ನಾಟಕ ಬೆಂಗಳೂರು ಕಟ್ಟಿದ ಕೆಂಪೇಗೌಡರನ್ನು ಒಂದು ಜಾತಿಗೆ ಸೀಮಿತ ಮಾಡಬಾರದು : ಡಿ.ಕೆ.ಶಿವಕುಮಾರ್

ಬೆಂಗಳೂರು ಕಟ್ಟಿದ ಕೆಂಪೇಗೌಡರನ್ನು ಒಂದು ಜಾತಿಗೆ ಸೀಮಿತ ಮಾಡಬಾರದು : ಡಿ.ಕೆ.ಶಿವಕುಮಾರ್

34
0

ಬೆಂಗಳೂರು : “ಕೆಂಪೇಗೌಡರು ಒಕ್ಕಲಿಗರಾದರೂ ಅವರನ್ನು ಒಂದು ಜಾತಿಗೆ ಸೀಮಿತ ಮಾಡಬಾರದು. ವಿಶ್ವಮಾನ್ಯ ಬೆಂಗಳೂರನ್ನು ಕಟ್ಟಿದ ಅವರು ಎಲ್ಲಾ ಜಾತಿ, ಧರ್ಮಕ್ಕೂ ನಾಡಪ್ರಭುಗಳಾಗಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ಕಠೀರವ  ಕ್ರೀಡಾಂಗಣದಲ್ಲಿ ಗುರುವಾರ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು, “ನಾಡಪ್ರಭುಗಳ ಹೆಸರನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ಶಿಕ್ಷಣ ಇಲಾಖೆಯಿಂದ ಎಲ್ಲಾ ಶಾಲೆಗಳಲ್ಲಿ ಕೆಂಪೇಗೌಡರ ಬಗ್ಗೆ ಚರ್ಚಾ ಸ್ಪರ್ಧೆ ನಡೆಸಲು ಹಾಗೂ ತಿಳುವಳಿಕೆ ನೀಡಲು ಪ್ರತಿ ತಾಲ್ಲೂಕಿಗೆ ಬಿಬಿಎಂಪಿಯಿಂದ ತಲಾ 1 ಲಕ್ಷ ಹಣ ಬಿಡುಗಡೆ ಮಾಡಲಾಗಿದೆ. ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂದು ಪ್ರಧಾನ ಕಾರ್ಯದರ್ಶಿಗಳು ಮುಂದಿನ ದಿನಗಳಲ್ಲಿ ತಿಳಿಸಲಿದ್ದಾರೆ” ಎಂದರು.

ನಾಡಪ್ರಭು ಕೆಂಪೇಗೌಡರ ಜಯಂತಿಗೆ ಪ್ರತಿ ಸಮುದಾಯದ ಗುರುಗಳನ್ನು ಆಹ್ವಾನಿಸಿಬೇಕು. ಇವರು ಜಾತಿ- ಧರ್ಮಗಳನ್ನು ಮೀರಿದ ನಾಯಕ. ಕೇವಲ ಒಂದು ಸಮುದಾಯಕ್ಕೆ ಸೇರಿದವರಲ್ಲ. ಪ್ರತಿ ಆಚಾರ, ವಿಚಾರ ವೃತ್ತಿ, ಸಮಾಜ, ಸಮುದಾಯಗಳನ್ನು ಕಾಪಾಡಿಕೊಂಡು ಬರುತ್ತಿದ್ದವರು ಇವರು” ಎಂದು ಹೇಳಿದರು.

150 ಕಿ.ಮೀ ಮೇಲ್ಸೆತುವೆ ನಿರ್ಮಾಣ, ಬಿಸನೆಸ್ ಕಾರಿಡಾರ್ ಗೆ ಚಾಲನೆ:

“ಪೆರಿಫೆರಲ್ ರಿಂಗ್ ರಸ್ತೆ ಕಾರ್ಯರೂಪಕ್ಕೆ ಬರೆದೆ ನಿಂತುಹೋಗಿತ್ತು. ಏಳೆಂಟು ಬಾರಿ ಯಾರೂ ಸಹ ಟೆಂಡರ್ ನಲ್ಲಿ ಭಾಗವಹಿಸಿರಲಿಲ್ಲ. ಈಗ ಬಿಡಿಎ ಮೂಲಕ ಇದಕ್ಕೆ ಹೊಸ ರೂಪ ನೀಡಲಾಗಿದೆ. ಸಧ್ಯದಲ್ಲೇ ಕ್ಯಾಬಿನೆಟ್ ಮುಂದೆಯಿಟ್ಟು ಬಿಸನೆಸ್ ಕಾರಿಡಾರ್ ಎಂದು ಪರಿವರ್ತನೆ ಮಾಡಲಾಗುವುದು. ಸಂಚಾರ ದಟ್ಟಣೆ ನಿವಾರಣೆಗೆ 150 ಕಿ.ಮೀನಷ್ಟು ಮೇಲ್ಸೆತುವೆಗಳ ನಿರ್ಮಾಣ ಹಾಗೂ ಸಿಗ್ನಲ್ ಫ್ರೀ ಕಾರಿಡಾರ್ ಗಳನ್ನು ನಿರ್ಮಾಣ ಮಾಡಲು ಸರಕಾರ ಮುಂದಾಗಿದೆ. ಟನಲ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದು, ಹೊಸ ರೀತಿಯನ್ನು ರಾಜಧಾನಿಯನ್ನು ನಿರ್ಮಾಣ ಮಾಡಲು ಬದ್ದವಾಗಿದೆ” ಎಂದು ತಿಳಿಸಿದರು.

“ಮುಂದಿನ ವರ್ಷದಿಂದ ಕೆಂಪೇಗೌಡರ ಜಯಂತಿಗೆ ವಿಶೇಷ ಸ್ವರೂಪ ನೀಡಿ ಆಚರಿಸಲಾಗುವುದು. ಸುಮ್ಮನಹಳ್ಳಿ ರಸ್ತೆ ಬಳಿಯ 5 ಎಕರೆ ಜಾಗದಲ್ಲಿ ಕೆಂಪೇಗೌಡ ಅಭಿವೃದ್ದಿ ಪ್ರಾಧಿಕಾರದ ಕಚೇರಿಯನ್ನು ಅತ್ಯುತ್ತಮ ಸ್ವರೂಪದಲ್ಲಿ ನಿರ್ಮಾಣ ಮಾಡಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಸಕರು, ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಆವಧಿಯಲ್ಲಿ 10 ಎಕರೆ ವಿಸ್ತೀರ್ಣದ ಜಾಗದಲ್ಲಿ ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕಿ ಯಶಸ್ವಿಯಾಗಿದ್ದಾರೆ” ಎಂದು ಹೇಳಿದರು.

LEAVE A REPLY

Please enter your comment!
Please enter your name here