ಕೌಟುಂಬಿಕ ಕಲಹ ಹಿನ್ನೆಲೆ ಮದ್ಯದ ಅಮಲಿನಲ್ಲಿ ಪತ್ನಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು:ಕೌಟುಂಬಿಕ ಕಲಹ ಹಿನ್ನೆಲೆ ಮದ್ಯದ ಅಮಲಿನಲ್ಲಿ ಪತ್ನಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಮಿಳುನಾಡು ಮೂಲದ ನಾಗರತ್ನಂ ಮತ್ತು ಚಿಕ್ಕತಾಯಮ್ಮ ದಂಪತಿ ಕಾಮಾಕ್ಷಿಪಾಳ್ಯ ಕರೆ ಕಲ್ಲು ಏರಿಯಾದಲ್ಲಿ ವಾಸ ಮಾಡುತ್ತಿದ್ದರು. ಇವರಿಗೆ ಮದುವೆಯಾಗಿ 29 ವರ್ಷಗಳಾಗಿವೆ. . ಆರೋಪಿ ನಾಗರತ್ನಂಗೆ ಕುಡಿತದ ಚಟ ಹೆಚ್ಚಾಗಿತ್ತು. ನಿತ್ಯ ಕುಡಿದು ಗಲಾಟೆ ಮಾಡುತ್ತಿದ್ದ. ನಾಗರತ್ನಂ ಶಾಲೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ಆಗಿ ಕೆಲಸ ಮಾಡುತ್ತಿದ್ದ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಡಬಲ್ ಮರ್ಡರ್ ಕೇಸು: ರ್ಯಾಪರ್, ಮಾಡೆಲ್ ಎಂದು ಜೋಕರ್ ಅನುಕರಣೆ ಮಾಡುತ್ತಿದ್ದ ಆರೋಪಿ ಫೆಲಿಕ್ಸ್
ಪತ್ನಿಯೂ ಅದೇ ಶಾಲೆಯಲ್ಲಿ ಕೆಲಸ ಮಾಡಿ ಬಂದ ಹಣದಲ್ಲಿ ಮನೆ ನಡೆಸುತ್ತಿದ್ದರು. ನಿನ್ನೆ ರಾತ್ರಿ ಕುಡಿದು ಬಂದ ಪತಿ, ಪತ್ನಿಯೊಂದಿಗೆ ಜಗಳಕ್ಕೆ ನಿಂತಿದ್ದ. ಜಗಳ ವಿಕೋಪಕ್ಕೆ ತಿರುಗಿ ಮನೆಯಲ್ಲಿದ್ದ ಸುತ್ತಿಗೆಯಿಂದ ಆಕೆಯ ತಲೆ ಮೇಲೆ ಹಲ್ಲೆ ಮಾಡಿದ್ದಾನೆ. ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ಮರಳಿದ ಆರೋಪಿ ಪತ್ನಿಯೊಂದಿಗೆ ಜಗಳ ಆರಂಭಿಸಿದ್ದಾನೆ. ಆತ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಈ ವೇಳೆ ಸಂಬಂಧಿಕರೊಬ್ಬರು ಪುತ್ರ ರಾಜುಗೆ ಕರೆ ಮಾಡಿ ತಿಳಿಸಿದ್ದಾರೆ, ರಾಜು ಮನೆಗೆ ಮರಳು ವೇಳೆಗೆ ಆಕೆಯ ತಾಯಿ ಸಾವನ್ನಪ್ಪಿದ್ದರು.
ನಂತರ ಪತಿ ಪರಾರಿಯಾಗಿದ್ದ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.