ಕೆಂಗೇರಿಯಲ್ಲಿ ಶನಿವಾರ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ನಂತರ 35 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಸಾವನ್ನಪ್ಪಿದ್ದಾರೆ. ಮೃತನನ್ನು ಕನಕಪುರ ರಸ್ತೆ ತಾತಗುಣಿಯ ನಿಖಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಅವರ ತಂದೆ ಮಾಜಿ ಸೈನಿಕರಾಗಿದ್ದರೆ, ಅವರ ತಾಯಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು: ಕೆಂಗೇರಿಯಲ್ಲಿ ಶನಿವಾರ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ನಂತರ 35 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಸಾವನ್ನಪ್ಪಿದ್ದಾರೆ. ಮೃತನನ್ನು ಕನಕಪುರ ರಸ್ತೆ ತಾತಗುಣಿಯ ನಿಖಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಅವರ ತಂದೆ ಮಾಜಿ ಸೈನಿಕರಾಗಿದ್ದರೆ, ಅವರ ತಾಯಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಶನಿವಾರ ರಾತ್ರಿ ಕುಮಾರ್ ತನ್ನ ಸ್ನೇಹಿತನನ್ನು ಕರೆದುಕೊಂಡು ನೈಸ್ ರಸ್ತೆಯ ವೃಷಭಾವತಿ ಸೇತುವೆ ಹಾದು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.