Home ಕರ್ನಾಟಕ ಬೆಂಗಳೂರು | ಕೆಂಪೇಗೌಡ ವಿಮಾನ ನಿಲ್ದಾಣದ ರಸ್ತೆಯಲ್ಲಿ 80ಕಿ.ಮೀಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ...

ಬೆಂಗಳೂರು | ಕೆಂಪೇಗೌಡ ವಿಮಾನ ನಿಲ್ದಾಣದ ರಸ್ತೆಯಲ್ಲಿ 80ಕಿ.ಮೀಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಕ್ರಮ

45
0

ಬೆಂಗಳೂರು : ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಪ್ರತಿ ಗಂಟೆಗೆ 80 ಕಿ.ಮೀಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಅತಿವೇಗದ ಚಾಲನೆಯ ಪ್ರಕರಣ ದಾಖಲಿಸಿ ದಂಡ ವಿಧಿಸುವುದಾಗಿ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ವಾಹನ ಸವಾರರ ಅತಿವೇಗದ ಚಾಲನೆಯಿಂದಾಗಿ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳು ಸಂಭವಿಸುತ್ತಿವೆ.

ಈ ಹಿನ್ನೆಲೆ, ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಅತಿವೇಗದ ಚಾಲನೆಯನ್ನು ಪತ್ತೆ ಹಚ್ಚುವ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here