Home Uncategorized ಬೆಂಗಳೂರು: ಖಾಸಗಿ ಬಸ್- ಲಾರಿ ಢಿಕ್ಕಿ; 30 ಪ್ರಯಾಣಿಕರಿಗೆ ಗಾಯ

ಬೆಂಗಳೂರು: ಖಾಸಗಿ ಬಸ್- ಲಾರಿ ಢಿಕ್ಕಿ; 30 ಪ್ರಯಾಣಿಕರಿಗೆ ಗಾಯ

30
0

ಬೆಂಗಳೂರು: ‌ಖಾಸಗಿ ಬಸ್ಸೊಂದು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 30 ಪ್ರಯಾಣಿಕರು  ಗಾಯಗೊಂಡ ಘಟನೆ ನೆಲಮಂಗಲ ತಾಲ್ಲೂಕಿನ ತೊಣಚಿನಗುಪ್ಪೆ ಬಳಿ ಬುಧವಾರ ಮುಂಜಾನೆ ನಡೆದಿರುವ ಬಗ್ಗೆ ವರದಿಯಾಗಿದೆ.

ದಟ್ಟವಾದ ಮಂಜು ಆವರಿಸಿದ್ದರಿಂದ, ಸರಿಯಾಗಿ ರಸ್ತೆ ಕಾಣದೆ ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಗಂಭೀರ ಗಾಯಗೊಂಡ ಏಳು ಜನರನ್ನು ಆಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಪಘಾತದಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಸ್ಸನ್ನು ಕ್ರೇನ್ ಮೂಲಕ ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

LEAVE A REPLY

Please enter your comment!
Please enter your name here