ಚಿಂದಿ ಆಯುವ ಇಬ್ಬರು ಪಾನಮತ್ತ ವ್ಯಕ್ತಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಲ್ಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. ಬೆಂಗಳೂರು: ಚಿಂದಿ ಆಯುವ ಇಬ್ಬರು ಪಾನಮತ್ತ ವ್ಯಕ್ತಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಲ್ಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ಸುಮಾರು 35-40 ವರ್ಷದ ವ್ಯಕ್ತಿ ಕೊಲೆಯಾಗಿದ್ದಾನೆ. ಸದ್ಯಕ್ಕೆ ಮೃತನ ಹೆಸರು, ಗುರುತು ಹಾಗೂ ವಿಳಾಸ ಪತ್ತೆಯಾಗಿಲ್ಲ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಶನಿವಾರ ರಾತ್ರಿ 7.30ರ ಸುಮಾರಿಗೆ ಮಲ್ಲೇಶ್ವರದ ಲಿಂಕ್ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ಚಿಂದಿ ಆಯುವ ಇಬ್ಬರು ವ್ಯಕ್ತಿಗಳ ನಡುವೆ ಶನಿವಾರ ಮಧ್ಯದ ಅಮಲಿನಲ್ಲಿ ಜಗಳ ಆರಂಭವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಒಬ್ಬಾತ ದೊಣ್ಣೆಯಿಂದ ಮತ್ತೊಬ್ಬನ ತಲೆಗೆ ಹಲ್ಲೆಗೈದು ಪರಾರಿಯಾಗಿದ್ದಾನೆ.
ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಆ ವ್ಯಕ್ತಿ ಮೃತಪಟ್ಟಿದ್ದಾನೆ. ಕೊಲೆಗೈದ ವ್ಯಕ್ತಿ ಪರಾರಿಯಾಗಿದ್ದಾನೆ ಯಾವ ವಿಚಾರಕ್ಕೆ ಗಲಾಟೆ ನಡೆದಿದೆ ಎಂಬುದು ಇನ್ನೂ ತಿಳಿದುಬಂದಿದೆ.
ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಮೆ ಪೊಲೀಸುರ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.