ಮಹಿಳೆಯೊಬ್ಬರ ಚಿನ್ನದ ಸರ ದೋಚುವ ಉದ್ದೇಶದಿಂದ ಮಚ್ಚಿನಿಂದ ಹಲ್ಲೆ ನಡೆಸಿದ್ದ ಇಬ್ಬರು ಸರಗಳ್ಳರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಆಡುಗೋಡಿ ಸಮೀಪದ ಎಲ್‌ಆರ್ ನಗರದ ನಿವಾಸಿಗಳಾದ ಮನೋಜ್ ಕುಮಾರ್ ಮತ್ತು ಫ್ರಾಂಕ್ಲಿನ್ ಎಂದು ಗುರುತಿಸಲಾಗಿದೆ. ಬೆಂಗಳೂರು: ಮಹಿಳೆಯೊಬ್ಬರ ಚಿನ್ನದ ಸರ ದೋಚುವ ಉದ್ದೇಶದಿಂದ ಮಚ್ಚಿನಿಂದ ಹಲ್ಲೆ ನಡೆಸಿದ್ದ ಇಬ್ಬರು ಸರಗಳ್ಳರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಆಡುಗೋಡಿ ಸಮೀಪದ ಎಲ್‌ಆರ್ ನಗರದ ನಿವಾಸಿಗಳಾದ ಮನೋಜ್ ಕುಮಾರ್ ಮತ್ತು ಫ್ರಾಂಕ್ಲಿನ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಮಾರ್ಚ್ 6 ರಂದು ಸಂಜೆ ಸಾರಕ್ಕಿ ಕೆರೆಯ ಬಳಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಜೆಪಿ ನಗರ ಏಳನೇ ಹಂತದ ನಿವಾಸಿಯಾಗಿರುವ ಸಂತ್ರಸ್ತೆ ಸರಸ್ವತಿ ದೇವಸ್ಥಾನದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆಕೆಯ ಚಿನ್ನದ ಸರವನ್ನು ದೋಚಲು ಯತ್ನಿಸಿದ್ದಾರೆ. ಮಹಿಳೆ ಅದನ್ನು ವಿರೋಧಿಸಿ ಅವರೊಂದಿಗೆ ಜಗಳವಾಡಿದ್ದಾರೆ.
ಬಳಿಕ ಆರೋಪಿಗಳು ಆಕೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೈಗೆ ಗಂಭೀರ ಗಾಯ ಮಾಡಿ ಪರಾರಿಯಾಗಿದ್ದಾರೆ. ‘ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗಿದೆ ಮತ್ತು ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದ ನಂತರ ಆರೋಪಿಗಳನ್ನು ಗುರುತಿಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಇಬ್ಬರು ಸರಗಳ್ಳರ ಬಂಧನ, 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ
ಮನೋಜ್‌ಕುಮಾರ್‌ಗೆ ಕ್ರಿಮಿನಲ್ ಹಿನ್ನೆಲೆಯಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರವೂ ಆತ ಅಪರಾಧಗಳನ್ನು ಮಾಡುತ್ತಲೇ ಇದ್ದ. ಅಲ್ಲದೆ, ಆತನ ವಿರುದ್ಧ ಆಡುಗೋಡಿ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣವೂ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.