ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಶೋಧಾ(70), ಸುಮನ್(41), ನರೇಶ್ ಗುಪ್ತಾ(36) ಎಂಬ ತಾಯಿ, ಮಗಳು ಹಾಗೂ ಮಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ, ಮಗಳು ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತ ತಾಯಿ ಯಶೋಧಾರಿಗೆ ಮೂವರು ಮಕ್ಕಳಿದ್ದಾರೆ. ಈ ಪೈಕಿ ಒಬ್ಬ ಮಗಳು ಮದುವೆ ಆಗಿ ರಾಜಾಜಿನಗರದಲ್ಲಿ ನೆಲೆಸಿದ್ದಾಳೆ. ಮಗ ನರೇಶ್, ಮತ್ತೋರ್ವ ಪುತ್ರಿ ಸುಮನ್ ತಾಯಿ ಯಶೋಧಾ ಜತೆ ನೆಲೆಸಿದ್ದರು. ಆದ್ರೆ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ನರೇಶ್ ವೃತ್ತಿಯಲ್ಲಿ ಕಾಂಟ್ರಾಕ್ಟರ್ ಆಗಿದ್ದ.
ಇದನ್ನೂ ಓದಿ: ಆತ ಓದಿದ್ದು 8ನೇ ಕ್ಲಾಸ್ ಆದ್ರೂ, ಐಪಿಎಸ್ ಅಧಿಕಾರಿ ಎಂದು ಪೋಸ್ ಕೊಟ್ಟು 12ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ
ಯಶೋಧರಿಗೆ ಸಂಬಂಧಿಕರು ಹಲವು ಬಾರಿ ಕರೆ ಮಾಡಿದ್ದು ಅವರು ಸ್ವೀಕರಿಸಿಲ್ಲ. ಈ ಹಿನ್ನಲೆ ಸಂಬಂಧಿಕರು ರಾಜಾಜಿನಗರದಲ್ಲಿರುವ 2ನೇ ಮಗಳಿಗೆ ಕಾಲ್ ಮಾಡಿ ತಿಳಿಸಿದ್ದಾರೆ. ನಂತರ ಮನೆ ಬಳಿ ಬಂದಾಗ ಚಪ್ಪಲಿ, ಕಾರ್ ಇರುವುದು ಪತ್ತೆಯಾಗಿದೆ. ಬಳಿಕ ಮನೆ ಒಳಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಗಳು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಪೊಲೀಸರು ಕುಟುಂಬಸ್ಥರ ದೂರಿಗಾಗಿ ಕಾಯುತ್ತಿದ್ದಾರೆ. ಮೃತದೇಹಗಳನ್ನು ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಮಡೆದಿದೆ.
ನಾಲ್ಕು ತಿಂಗಳ ಹಿಂದೆ ಯಶೋಧ ಪತಿ ಮೃತ ಪಟ್ಟಿದ್ದರು. ಈ ಹಿನ್ನಲೆ ನೊಂದಿದ್ದ ಪತ್ನಿ, ಮಕ್ಕಳು ಅವರು ಬಳಸುತಿದ್ದ ವಸ್ತುಗಳನ್ನು ಅನಾಥಶ್ರಮಕ್ಕೆ ನೀಡಿ ಅಪಾರ್ಟ್ಮೆಂಟ್ ಗೆ ಶಿಫ್ಟ್ ಆಗಿದ್ದರು. ಇನ್ನು ಅಪಾರ್ಟ್ಮೆಂಟ್ ಸೆಕ್ಯುರಿಟಿ ಭೀಮಾಣ್ಣ ಮಾತನಾಡಿದ್ದು, ಕುಟುಂಬ ತುಂಬ ಒಳ್ಳೆಯವರು. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಬಂದಿದ್ದರೂ. ತಾಯಿ ಮತ್ತು ಇಬ್ಬರು ಮಕ್ಕಳು ವಾಸವಾಗಿದ್ದರು. ಮತ್ತೋರ್ವ ಮಗಳು ಅಡ್ವಕೇಟ್ ಆಗಿದ್ದಾರೆ. ಅವರು ಬೇರೆ ಕಡೆ ವಾಸವಿದ್ದಾರೆ. ನಿನ್ನೆ ರಾತ್ರಿ 10.30ರ ಸುಮಾರಿಗೆ ವಿಚಾರ ಗೊತ್ತಾಯ್ತು. ಅಡ್ವಕೇಟ್ ಮಗಳೇ ಬಂದು ನೋಡಿದ್ದಾರೆ. ಬಳಿಕ ಅವರೇ ಪೊಲೀಸರಿಗೆ ಮಾಹಿತಿ ಸಹ ನೀಡಿದ್ದಾರೆ. ಮನೆಯಲ್ಲಿದ್ದ ಓರ್ವರಿಗೆ ಹುಷಾರಿರಲಿಲ್ಲ. ಮನೆಯವರೆಲ್ಲಾ ಒಳ್ಳೆಯವರು ಎಂದರು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ