Home ಕರ್ನಾಟಕ ಬೆಂಗಳೂರು : ದಾಖಲೆ ಇಲ್ಲದ ಸಾಗಿಸುತ್ತಿದ್ದ 20 ಲಕ್ಷ ರೂ. ನಗದು ಜಪ್ತಿ

ಬೆಂಗಳೂರು : ದಾಖಲೆ ಇಲ್ಲದ ಸಾಗಿಸುತ್ತಿದ್ದ 20 ಲಕ್ಷ ರೂ. ನಗದು ಜಪ್ತಿ

29
0

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೆ ಎಲ್ಲೆಡೆ ಕಟ್ಟೆಚ್ಚರ ವಹಿಸಿರುವ ಪೊಲೀಸರು ದಾಖಲೆ ಇಲ್ಲದ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿರುವುದಾಗಿ ವರದಿಯಾಗಿದೆ.

ನಗರದ ಅಶೋಕ ನಗರ ರೆಸಿಡೆನ್ಸಿ ರಸ್ತೆಯಲ್ಲಿ ಶನಿವಾರ ರಾತ್ರಿ ಕಾರಿನಲ್ಲಿ ಸಾಗಿಸುತ್ತಿದ್ದ 13 ಲಕ್ಷ ರೂ. ಹಾಗೂ ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಜಾಸ್‍ಟೋಲ್ ಬಳಿ 7 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರಿನ ಅಶೋಕನಗರ ರೆಸಿಡೆನ್ಸಿ ರಸ್ತೆಯಲ್ಲಿ ಶನಿವಾರ ರಾತ್ರಿ ಚೆಕ್‍ ಪೋಸ್ಟ್ ನಲ್ಲಿ ಪರಿಶೀಲನೆ ನಡೆಸುತ್ತಿದ್ದಾಗ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13 ಲಕ್ಷ ರೂ. ಪತ್ತೆಯಾಗಿದೆ. ಇದು ಕೋಳಿ ಮಾರಾಟದಿಂದ ಬಂದ ಹಣ ಎಂದು ಹೇಳಲಾಗಿದೆ. ಸದ್ಯ ಅಶೋಕನಗರದ ಠಾಣಾ ಪೊಲೀಸರು ಕಾರು ಮತ್ತು ಹಣವನ್ನು ವಶಕ್ಕೆ ಪಡೆದು ಪರಿಶೀಲನೆ ಕೈಗೊಂಡಿರುವುದಾಗಿ ಹೇಳಿದ್ದಾರೆ.

ನೆಲಮಂಗಲದ ಜಾಸ್‍ಟೋಲ್ ಬಳಿ ಬೋರ್‍ವೆಲ್ ಡೀಲರ್ ರಘುಪತಿ ಎಂಬುವರಿಂದ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7 ಲಕ್ಷ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನಿಂದ ತುಮಕೂರಿಗೆ ಹೋಗುತ್ತಿದ್ದಾಗ ಜಾಸ್ ಟೋಲ್ ಬಳಿ ಈ ಹಣ ಪತ್ತೆಯಾಗಿದ್ದು, ನೆಲಮಂಗಲ ಟೌನ್ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here