ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಮಂಗಳವಾರ ನಡೆದಿದೆ. ಬೆಂಗಳೂರು: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ಇಂದು ಬೆಳಗ್ಗೆ ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಟಿವಿಎಸ್ ಎಕ್ಸ್‌ಎಲ್ ಬೈಕ್‌ಗೆ ಟಿಪ್ಪರ್ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಕೆಳಗೆ ಬಿದ್ದಿದ್ದು, ಓರ್ವನ ಮೇಲೆ ಲಾರಿಯ ಚಕ್ರ ಹರಿದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ವ್ಯಕ್ತಿಯ ಕಾಲಿನ ಮೇಲೆ ಲಾರಿ ಹರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ.
ಇದನ್ನು ಓದಿ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಟ್ರಕ್-ಬಸ್ ಮುಖಾಮುಖಿ ಡಿಕ್ಕಿ, ನಾಲ್ವರ ದುರ್ಮರಣ, 22 ಮಂದಿಗೆ ಗಾಯ
ಅಪಘಾತ ನಂತರ ಚಾಲಕ ಲಾರಿಯನ್ನು ಅಲ್ಲಿಯೇ ಬಿಟ್ಟು ಪರಾರಿ ಆಗಿದ್ದಾನೆ.
ಈ ಘಟನೆ ನಡೆಯುತ್ತಿದ್ದಂತೆಯೇ ಸ್ಥಳದಲ್ಲಿದ್ದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.