Home Uncategorized ಬೆಂಗಳೂರು: ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಕಟ್ಟಡದಿಂದ ಬಿದ್ದು ಆರೋಪಿ ಸಾವು!

ಬೆಂಗಳೂರು: ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಕಟ್ಟಡದಿಂದ ಬಿದ್ದು ಆರೋಪಿ ಸಾವು!

21
0

ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಬೆಂಗಳೂರು: ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ.

ಮೃತರನ್ನು ವ್ಯಕ್ತಿಯನ್ನು ಬೇಗೂರು ನಿವಾಸಿ ಮೊಹಮ್ಮದ್ ಹುಸೇನ್ (31) ಎಂದು ಗುರುತಿಸಲಾಗಿದೆ. ಯುವತಿಗೆ ಲಾಂಗ್ ತೋರಿಸಿ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಆತನನ್ನು ಬಂಧನಕ್ಕೊಳಪಡಿಸಿಲು ನಾಲ್ವರು ಪೊಲೀಸರ ತಂಡ ಬುಧವಾರ ಹುಸೇನ್ ಅವರ ಮನೆಗೆ ತೆರಳಿತ್ತು.

ಈ ವೇಳೆ ಪೊಲೀಸರನ್ನು ಕಂಡ ಹುಸೇನ್ ಪರಾರಿಯಾಗಲು ಯತ್ನಿಸಿದ್ದಾನೆ. ಈ ಯತ್ನದಲ್ಲಿ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಬೊಮ್ಮನಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here