ಬೆಂಗಳೂರಿನಲ್ಲಿ ನಾಳೆ ಕರೆಕೊಟ್ಟಿರುವ ಖಾಸಗಿ ಸಾರಿಗೆ ಒಕ್ಕೂಟಗಳ ಮುಷ್ಕರದಿಂದ ಸಾರಿಗೆ ಸಂಚಾರದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಶಾಲಾ ಕಾಲೇಜಿಗೆ ರಜೆ ಇಲ್ಲ, ಪ್ರಯಾಣಿಕರ ಸಂಚಾರಕ್ಕೆ ತೊಂದರೆ ಇಲ್ಲ, ಹೆಚ್ಚುವರಿ ಬಸ್ ಗಳ ನಿಯೋಜನೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಬೆಂಗಳೂರು: ಬೆಂಗಳೂರಿನಲ್ಲಿ ನಾಳೆ ಕರೆಕೊಟ್ಟಿರುವ ಖಾಸಗಿ ಸಾರಿಗೆ ಒಕ್ಕೂಟಗಳ ಮುಷ್ಕರದಿಂದ ಸಾರಿಗೆ ಸಂಚಾರದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಶಾಲಾ ಕಾಲೇಜಿಗೆ ರಜೆ ಇಲ್ಲ, ಪ್ರಯಾಣಿಕರ ಸಂಚಾರಕ್ಕೆ ತೊಂದರೆ ಇಲ್ಲ, ಹೆಚ್ಚುವರಿ ಬಸ್ ಗಳ ನಿಯೋಜನೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಶಕ್ತಿ ಯೋಜನೆ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಳೆ (ಸೆ.11) ಬೆಂಗಳೂರಿನಲ್ಲಿ (Bengaluru) ಖಾಸಗಿ ಸಾರಿಗೆ ಒಕ್ಕೂಟಗಳು ಮುಷ್ಕರ ನಡೆಸಲಿವೆ. ಇದರಿಂದಾಗಿ ನಗರವಾಸಿಗಳಿಗೆ ಸಮಸ್ಯೆ ಎದುರಾಗಲಿದೆ. ಇದೇ ವಿಚಾರವಾಗಿ ಇಂದು ರಾತ್ರಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುದ್ದಿಗೋಷ್ಛಿ ನಡೆಸಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಶಕ್ತಿಯೋಜನೆಗೆ ಖಾಸಗಿ ಸಾರಿಗೆ ಸಂಘಟನೆ ಖಂಡನೆ: ಇಂದು ರಾತ್ರಿಯಿಂದಲೇ ಬೆಂಗಳೂರು ಬಂದ್, ಆಟೋ, ಕ್ಯಾಬ್, ಖಾಸಗಿ ಬಸ್ ಸೇವೆ ಸ್ಥಗಿತ
‘ಹೆಚ್ಚುವರಿ ಬಸ್ಗಳು ರಸ್ತೆಗೆ ಇಳಿಯುವುದರಿಂದ ಸಮಸ್ಯೆಯಾಗಲ್ಲ. ಸಾರಿಗೆ ಸಂಘಟನೆಗಳ ಜೊತೆ ಈ ಹಿಂದೆಯೂ ಮಾತನಾಡಿದ್ದೆವು. ಸಿಎಂ ಸಿದ್ದರಾಮಯ್ಯ ತ್ತು ನಾನು ಕೂಡ ಎರಡು ಬಾರಿ ಸಭೆ ನಡೆಸಿದ್ದೆವು. ಆದರೆ ಸಭೆಗೆ ಹಾಜರಾಗದ ಕೆಲವು ಸಂಘಟನೆಗಳು ಬಂದ್ಗೆ ಕರೆ ನೀಡಿವೆ. ಅವರು ಎಷ್ಟು ಸಂಘ ಆದರೂ ಇಟ್ಟುಕೊಳ್ಳಲಿ. ಮುಷ್ಕರ ಮಾಡೆ ಮಾಡುತ್ತೇವೆ ಅನ್ನೋರ ಬಗ್ಗೆ ಏನು ಹೇಳಲಿ. ಬೆಂಗಳೂರಿನಲ್ಲಿ ನಾಳೆ ಹೆಚ್ಚುವರಿ ನಾಲ್ಕು ಸಾವಿರ ಬಸ್ಗಳು ರಸ್ತೆಗೆ ಇಳಿಯಲಿವೆ. ಈ ಬಗ್ಗೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಎಂಡಿಗಳ ಜೊತೆ ಮಾತನಾಡಿದ್ದೇನೆ. ವಿಮಾನ ನಿಲ್ದಾಣ, ಆಸ್ಪತ್ರೆಗಳ ಬಳಿ ಹೆಚ್ಚಿನ ಟ್ರಿಪ್ಗೆ ಸೂಚಿಸಿದ್ದೇವೆ. ಶಾಲಾ ಕಾಲೇಜು, ಕಚೇರಿಗೆ ತೆರಳುವವರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಸಾರಿಗೆ ಸಚಿವರು ತಿಳಿಸಿದರು.
In the backdrop of Federation of Karnataka Private Transport Unions call for strike on Sep 11, Transport Minister @RLR_BTM said govt is open for talks.@aknisreekarthik @santwana99 @AshwiniMS_TNIE @XpressBengaluru @KannadaPrabha pic.twitter.com/TiSiCpTN96
— Nagaraja Gadekal (@gadekal2020) September 6, 2023
ನಾಳೆ ಯಾವುದೇ ಶಾಲಾ ಕಾಲೇಜಿಗೆ ರಜೆ ಇಲ್ಲ
ಬೆಂಗಳೂರಿನಲ್ಲಿ ನಾಳೆ ಯಾವುದೇ ಶಾಲಾ ಕಾಲೇಜಿಗೆ ರಜೆ ಇಲ್ಲ ಎಂದು ಸ್ಪಷ್ಟಪಡಿಸಿದ ರಾಮಲಿಂಗಾರೆಡ್ಡಿ, ಖಾಸಗಿ ಸಾರಿಗೆ ಬಂದ್ಗೆ ಕರೆ ನೀಡಿರುವವರು ಕಾನೂನು ಪಾಲಿಸಲಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಅವರು ಪ್ರತಿಭಟನೆ ನಡೆಸಲಿ. ಪ್ರತಿಭಟನೆ ಮಾಡುವವರಿಗೂ ಸರ್ಕಾರದಿಂದ ರಕ್ಷಣೆ ನೀಡುತ್ತೇವೆ ಎಂದರು. ಖಾಸಗಿ ಸಾರಿಗೆ ಒಕ್ಕೂಟಗಳ ಬೇಡಿಕೆ ಅನುಸಾರ ಅನುಪಾಲನಾ ವರದಿ ಸಹ ಮಾಡಿದ್ದೇವೆ. ಅವರ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಐದು ಸಾವಿರ ಕೋಟಿ ಹೆಚ್ಚುವರಿ ಹಣ ಬೇಕಾಗುತ್ತದೆ. ಅವರಿಗೆ ಸಮಸ್ಯೆ ಆಗುತ್ತೆ ಅಂತ ತೆರಿಗೆ ಹೆಚ್ಚಳ ಕ್ರಮ ಸಹ ಬಾಕಿ ಇಟ್ಟಿದ್ದೇವೆ ಎಂದರು.
ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಸೇರಿ ಇತರೆ ನಿಗಮಗಳಿಗೆ 13,000 ಸಿಬ್ಬಂದಿ ನೇಮಕ, 4,000 ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಬೇಡಿಕೆ ಈಡೇರಿಕೆಯತ್ತ ಗಮನ
ಖಾಸಗಿ ಸಾರಿಗೆ ಒಕ್ಕೂಟದ ಬೇಡಿಕೆ ಈಡೇರಿಕೆ ಬಗ್ಗೆ ಗಮನಿಸುತ್ತೇವೆ. 2016 ರಿಂದ ಱಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ನಡೆಸುತ್ತಿದೆ. ಶಕ್ತಿ ಯೋಜನೆ ಜಾರಿಯಾದ ನಂತರ ಹೆಚ್ಚಿನ ಸಮಸ್ಯೆಯಾಗಿಲ್ಲ. ಹಾಗಾಗಿ ಖಾಸಗಿ ಸಾರಿಗೆ ಒಕ್ಕೂಟದ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ. ನಮ್ಮ ಸರ್ಕಾರ ಬಂದ ಮೇಲೆ ವಾಹನ ತೆರಿಗೆ ಹೆಚ್ಚಳ ಮಾಡಿಲ್ಲ. ಕಳೆದ 4-5 ವರ್ಷಗಳಿಂದ ತೆರಿಗೆ ಹೆಚ್ಚಳ ವಿಚಾರ ಚರ್ಚೆಯಲ್ಲಿತ್ತು. ನಮ್ಮ ಸರ್ಕಾರ ಬಂದ ಬಳಿಕ ತೆರಿಗೆ ಹೆಚ್ಚಳ ಆದೇಶ ಜಾರಿಗೆ ಬಂದಿದೆ. ಖಾಸಗಿ ವಾಹನ ಚಾಲಕರ ಇತರೆ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ. ನಮ್ಮ ಸರ್ಕಾರ ಬಂದ ಮೇಲೆ ಪ್ರಮುಖವಾಗಿ ಎರಡು ಸಮಸ್ಯೆಯಾಗಿದೆ. ಒಂದು ಶಕ್ತಿ ಯೋಜನೆ ಪರಿಣಾಮ ಹಾಗೂ ಇನ್ನೊಂದು ಲೈಫ್ ಟೈಮ್ ಟ್ಯಾಕ್ಸ್ ಎಂದರು.