Home Uncategorized ಬೆಂಗಳೂರು: ಬಿಹಾರ ಮೂಲದ ಯುವತಿ ಶವವಾಗಿ ಪತ್ತೆ

ಬೆಂಗಳೂರು: ಬಿಹಾರ ಮೂಲದ ಯುವತಿ ಶವವಾಗಿ ಪತ್ತೆ

34
0

ಪೀಣ್ಯ ಇಂಡಸ್ಟ್ರಿಯಲ್ ಏರಿಯಾದ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ 22 ವರ್ಷದ ಯುವತಿಯೊಬ್ಬಳು ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಬೆಂಗಳೂರು: ಪೀಣ್ಯ ಇಂಡಸ್ಟ್ರಿಯಲ್ ಏರಿಯಾದ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ 22 ವರ್ಷದ ಯುವತಿಯೊಬ್ಬಳು ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಯುವತಿಯನ್ನು ರೀಮಾ ಕುಮಾರಿ ಎಂದು ಗುರ್ತಿಸಲಾಗಿದೆ. ಯುವತಿ ತಾನು ವಾಸವಿದ್ದ ಕಾರ್ಖಾನೆಗೆ ಸೇರಿದ ಹಾಸ್ಟೆಲ್‌ನ ಮೂರನೇ ಮಹಡಿಯಿಂದ ಕೆಳಗೆ ಜಿಗಿದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಸೋಮವಾರ ರಾತ್ರಿ ಯುವತಿ ಪದೇ ಪದೇ ಟೆರೇಸ್’ಗೆ ಹೋಗುತ್ತಿರುವುದನ್ನು ಭದ್ರತಾ ಸಿಬ್ಬಂದಿಗಳು ನೋಡಿದ್ದಾರೆ. ಬಳಿಕ ಯುವತಿಯನ್ನು ರೂಮಿಗೆ ಕಳುಹಿಸಿದ್ದಾರೆ. ಆದರೆ, ಮರು ದಿನ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ.

ಘಟನೆ ನಡೆದು ಎರಡು ದಿನ ಕಳೆದರೂ ಪ್ರಕರಣವನ್ನು ಕೈಗೆತ್ತಿಕೊಳ್ಳಲು ವಿಳಂಬ ಮಾಡಿದ ಪೀಣ್ಯ ಪೊಲೀಸರ ವಿರುದ್ಧ ಗಾರ್ಮೆಂಟ್ಸ್ ಲೇಬರ್ ಯೂನಿಯನ್ (ಜಿಎಲ್‌ಯು) ಆಕ್ರೋಶ ಹೊರಹಾಕಿದ್ದು, ಮಂಗಳವಾರ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿತು.

ಈ ನಡುವೆ ಯುವತಿಯ ಕುಟುಂಬಸ್ಥರು ಗುರುವಾರ ಠಾಣೆಗೆ ಬಂದಿದ್ದು, ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೆಲಸ ಸ್ಥಳದಲ್ಲಿ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಗಳವಾರ ಬೆಳಗ್ಗೆ ಗಾರ್ಮೆಂಟ್ಸ್‌ಗೆ ಹೋಗಿದ್ದ ಯುವಕಿ ಆರೋಗ್ಯ ಕಾರಣ ನೀಡಿ ಹಾಸ್ಟೆಲ್’ಗೆ ವಾಪಸ್ಸಾಗಿದ್ದಳು. ಬಳಿಕ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

ಮಹಡಿಯಿಂದ ಯುವತಿ ಕೆಳಗೆ ಬೀಳುತ್ತಿದ್ದಂತೆಯೇ ಸಮೀಪದ ಪ್ರಾವಿಷನ್ ಸ್ಟೋರ್‌ನ ಮಾಲೀಕರು ಕೂಡಲೇ ದಾಸರಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಳಿಸಿದ್ದಾರೆ. ಬಳಿಕ ಅಲ್ಲಿಂದ ಎರಡು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವತಿ ರಾತ್ರಿ 7.10 ರ ಸುಮಾರಿಗೆ ಮೃತಪಟ್ಟಿದ್ದಾಳೆಂದು ತಿಳಿದುಬಂದಿದೆ.

ಈ ನಡುವೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಯುವತಿಯ ಮೊಬೈಲ್ ಫೋನ್ ಅನ್ನು ಎಫ್‌ಎಸ್‌ಎಲ್‌ಗೆ ರವಾನಿಸಿದ್ದಾರೆ.

LEAVE A REPLY

Please enter your comment!
Please enter your name here