ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ ಮೃತಪಟ್ಟ ತಾಯಿ ಹಾಗೂ ಎರಡು ವರ್ಷದ ಮಗುವಿನ ಕುಟುಂಬಸ್ಥರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಹಾಗೂ ಬಿಎಂಆರ್ ಸಿಎಲ್ ನಿಂದ 20 ಲಕ್ಷ ರೂ. ಪರಿಹಾರವನ್ನು ಪ್ರಕಟಿಸಲಾಗಿದೆ. ಬೆಂಗಳೂರು: ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ ಮೃತಪಟ್ಟ ತಾಯಿ ಹಾಗೂ ಎರಡು ವರ್ಷದ ಮಗುವಿನ ಕುಟುಂಬಸ್ಥರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಹಾಗೂ ಬಿಎಂಆರ್ ಸಿಎಲ್ ನಿಂದ 20 ಲಕ್ಷ ರೂ. ಪರಿಹಾರವನ್ನು ಪ್ರಕಟಿಸಲಾಗಿದೆ.
ಎಚ್ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ವೇಳೆ ಪಿಲ್ಲರ್ಗೆ ನಿಲ್ಲಿಸಿದಂತಹ ಕಬ್ಬಿಣದ ರಾಡ್ಗಳು ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗುವಿನ ಮೇಲೆ ಬಿದಿದ್ದವು. ಇದರಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತಂದೆ ಹಾಗೂ ಮಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ.
Mother and child died as a construction pillar of Namma Metro fell near Nagavara in Bengaluru @XpressBengaluru @NewIndianXpress @Cloudnirad @ramupatil_TNIE @AshwiniMS_TNIE @shibasahu2012 @vinodkumart5 @gadekal2020 pic.twitter.com/rHSRPOF8XW
— Shashidhar Byrappa (@ShashidharNIE) January 10, 2023
ಇದನ್ನೂ ಓದಿ: ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ನ ಕಬ್ಬಿಣದ ರಾಡ್ ಗಳು ಬಿದ್ದು ತಾಯಿ, ಮಗು ಸಾವು
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜುಂ ಪರ್ವೇಜ್, ಇದೊಂದು ದುರಾದೃಷ್ಟಕರ ಘಟನೆಯಾಗಿದ್ದು, ಮೃತರ ಕುಟುಂಬಸ್ಥರಿಗೆ 20 ಲಕ್ಷ ಪರಿಹಾರ ಒದಗಿಸಲಾಗುವುದು ಎಂದರು.
Pillar collapse in Bengaluru | A pillar fell on the road and a woman and her child were badly injured and died. It is very unfortunate. Will provide 20 Lakh ex-gratia to the kin of the victims: Anjum Parvez, MD, BMRCL pic.twitter.com/0ZEpSyIXVT
— ANI (@ANI) January 10, 2023
ಮೆಟ್ರೋ ನಿರ್ಮಾಣದಲ್ಲಿ ಸಾಧ್ಯವಾದಷ್ಟು ಅತ್ಯಂತ ಹೆಚ್ಚಿನ ಗುಣಮಟ್ಟವನ್ನು ಅನುಸರಿಸುತ್ತಿದ್ದೇವೆ. ಘಟನೆ ಸಂಬಂಧ ವಿಸ್ತೃತವಾಗಿ ತನಿಖೆ ನಡೆಸಲಾಗುವುದು, ಒಂದು ವೇಳೆ ತಾಂತ್ರಿಕ ದೋಷ ಅಥವಾ ಕಾರ್ಮಿಕರ ತಪ್ಪಿನಿಂದಾದ ಅವಘಡ ಎಂದು ಕಂಡುಬಂದಲ್ಲಿ ಮುಂದೆ ಇಂತಹ ಘಟನೆ ಸಂಭವಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮೃತರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಹಾಗೂ ಘಟನೆ ಸಂಬಂಧ ಸಮಗ್ರವಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದರು.