Home Uncategorized ‌ಬೆಂಗಳೂರು: ಮೆಟ್ರೋ ಹಳಿ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

‌ಬೆಂಗಳೂರು: ಮೆಟ್ರೋ ಹಳಿ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

22
0

ಬೆಂಗಳೂರು: ಯುವಕನೊಬ್ಬ ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಜಾಲಹಳ್ಳಿ ಮೆಟ್ರೋ ಸ್ಟೇಷನ್ ನಲ್ಲಿ ನಡೆದಿದೆ. 

ಆತ್ಮಹತ್ಯೆಗೆ ಯತ್ನಿಸಿದ ಕೇರಳ ಮೂಲದ 23 ವರ್ಷದ ಯುವಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಘಟನೆ ಹಿನ್ನೆಲೆ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಸುಮಾರು 15 ನಿಮಿಷಗಳ ಕಾಲ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ತೊಂದರೆ ಅನುಭವಿಸಬೇಕಾಯಿತು.

ಮೆಟ್ರೋ ಹಳಿಗಳಲ್ಲಿ 750 ವೋಲ್ಟ್ ಹೆವಿ ಪವರ್ ಕರೆಂಟ್ ಹಾದು ಹೋಗಿರುತ್ತದೆ. ಹಾಗಾಗಿ ಮತ್ತೆ ಪವರ್ ಜನರೇಟ್ ಮಾಡಲು ಅರ್ಧ ಗಂಟೆ ಸಮಯ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಯುವಕನ ತಲೆಗೆ ಗಾಯ

ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಆದರೆ ಯುವಕ ಒಮ್ಮಲೇ ಹಳಿ ಮೇಲೆ ಹಾರಿದ್ದರಿಂದ ಮೆಟ್ರೋ ಮುಂಭಾಗ ತಲೆಗೆ ಬಡಿದಿದೆ. ಇದರಿಂದ ತಲೆಗೆ  ಗಾಯವಾಗಿದೆ.

LEAVE A REPLY

Please enter your comment!
Please enter your name here