ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ(Bengaluru-Mysuru expressway) ದ್ವಿಚಕ್ರ. ತ್ರಿಚಕ್ರ ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ಬ್ರೇಕ್ ಹಾಕಲಾಗಿದೆ. ಬದಲಿಗೆ ಸರ್ವಿಸ್ ರಸ್ತೆಯಲ್ಲಿ ಮಾತ್ರ ಈ ವಾಹನಗಳು ಸಂಚರಿಸಬಹುದು. ಈ ನಿಯಮ ಇಂದು ಆಗಸ್ಟ್ 1ರಿಂದ ಜಾರಿಗೆ ಬರಲಿದೆ. ಬೆಂಗಳೂರು/ಮೈಸೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ(Bengaluru-Mysuru expressway) ದ್ವಿಚಕ್ರ. ತ್ರಿಚಕ್ರ ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ಬ್ರೇಕ್ ಹಾಕಲಾಗಿದೆ. ಬದಲಿಗೆ ಸರ್ವಿಸ್ ರಸ್ತೆಯಲ್ಲಿ ಮಾತ್ರ ಈ ವಾಹನಗಳು ಸಂಚರಿಸಬಹುದು. ಈ ನಿಯಮ ಇಂದು ಆಗಸ್ಟ್ 1ರಿಂದ ಜಾರಿಗೆ ಬರಲಿದೆ.
ಇದಕ್ಕೆ ಕಾರಣ ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಪ್ರತಿನಿತ್ಯ ಆಗುತ್ತಿರುವ ಅಪಘಾತಗಳು. ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಉದ್ಘಾಟನೆಯಾದ ದಿನದಿಂದಲೂ ನಿರಂತರ ಅಪಘಾತಗಳು ನಡೆದು ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆ ಕಾರಣಕ್ಕೆ ಹೊಸ ನಿಯಮ ಜಾರಿ ಮಾಡಲಾಗಿದೆ.
ರೈತರ ಅಸಮಾಧಾನ: ಎಕ್ಸ್‌ಪ್ರೆಸ್‌ವೇನಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್‌ಗೆ ನಿಷೇಧ ಹೇರಿದ್ದು ಸ್ಥಳೀಯರು ಮತ್ತು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ಪ್ರೆಸ್ ಹೈವೇಗಾಗಿ ನಮ್ಮ ಜಮೀನು ಕೊಟ್ಟಿದ್ದೇವೆ. ನಮಗೂ ಇಂತಹ ರಸ್ತೆಯಲ್ಲಿ ಓಡಾಡಬೇಕು ಅಂತ ಆಸೆ ಇರುತ್ತದೆ. ನಮ್ಮ ಹೆಂಡತಿ ಮಕ್ಕಳು ಈ ರಸ್ತೆಯಲ್ಲಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿ ಅಂದ್ರೆ ನಾವು ಏನು ಮಾಡುವುದು ಎಂದು ಕೇಳುತ್ತಾರೆ.
ಆದೇಶ ಉಲ್ಲಂಘಿಸಿದರೆ ದಂಡ: ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿದರೆ 500 ರೂಪಾಯಿ ದಂಡ ಸಹ ವಿಧಿಸಲಾಗುತ್ತಿದೆ. ಮೈಸೂರಿನಲ್ಲಿ ಆರಂಭವಾಗುವ ಹೈವೇ ಮತ್ತು ಬೆಂಗಳೂರು ಹೈವೇ ಆರಂಭದಲ್ಲಿ 10 ಕಡೆಗಳಲ್ಲಿ ಪೊಲೀಸರು ಹಾಗೂ ಪ್ರಾಧಿಕಾರದ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.