Home Uncategorized ಬೆಂಗಳೂರು – ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ: ಸಿಎಂ  ಸಿದ್ದರಾಮಯ್ಯ ಪರಿಶೀಲನೆ

ಬೆಂಗಳೂರು – ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ: ಸಿಎಂ  ಸಿದ್ದರಾಮಯ್ಯ ಪರಿಶೀಲನೆ

15
0

ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರೇ ಖುದ್ದಾಗಿ ಎಕ್ಸ್ ಪ್ರೆಸ್ ಹೈವೇ  ವೀಕ್ಷಿಸಿದ್ದಾರೆ. ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರೇ ಖುದ್ದಾಗಿ ಎಕ್ಸ್ ಪ್ರೆಸ್ ಹೈವೇ  ವೀಕ್ಷಿಸಿದ್ದಾರೆ.

ಪೊಲೀಸರು ಹಾಗೂ ಅಧಿಕಾರಿಗಳೊಂದಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಸಿಎಂ ಆದ ಮೊದಲ ಬಾರಿಗೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದರು. ನಂತರ ಅಧಿಕಾರಿಗಳು ಹಾಗೂ ಪೊಲೀಸರ ಬಳಿ ಹೈವೇ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಇಂದು ಸಿಎಂ ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದು, ಮಂಡ್ಯ ತಾಲೂಕಿನ ಗುಮ್ಮಡಹಳ್ಳಿ ಗೇಟ್ ಹೆದ್ದಾರಿ ವೀಕ್ಷಣೆ ನಡೆಸಿದ್ದಾರೆ.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು, ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಡಿಟೆಕ್ಟರ್ ಗಳನ್ನು ಅಳವಡಿಸಿರಲಿಲ್ಲ. ಹಾಗಾಗಿ ಅಪಘಾತಗಳು ಹೆಚ್ಚಾಗಿದ್ದವು. ಜುಲೈ ತಿಂಗಳಲ್ಲಿ ಅಪಘಾತಗಳು ಕಡಿಮೆ ಯಾಗಿವೆ. ಜೂನ್ ತಿಂಗಳಲ್ಲಿ 20 ಅಪಘಾತಗಳಾಗಿದ್ದರೆ, ಜುಲೈನಲ್ಲಿ 5 ಅಪಘಾತಗಳು ಸಂಭವಿಸಿವೆ.

ಸ್ಪೀಡ್ ಡಿಟೆಕ್ಟರ್ ಗಳನ್ನು 10 ಕಿಮೀ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯ. ಮುಖ್ಯ ಕಾರ್ಯದರ್ಶಿಗಳು ಎನ್.ಹೆಚ್.ಎ. ಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಎಕ್ಸ್ ಪ್ರೆಸ್ ವೇ ನಲ್ಲಿ ಕೆಲವು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು ಅದಕ್ಕಾಗಿಯೇ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು,ಮಂಡ್ಯ, ಶ್ರೀರಂಗಪಟ್ಟಣ, ಬೈಪಾಸ್ ರಸ್ತೆಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರವೇಶ ಮತ್ತು ನಿರ್ಗಮನ ರಸ್ತೆಗಳನ್ನು ಮಾರ್ಚ್ ಮಾಹೆಯೊಳಗೆ ಪೂರ್ಣ ಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

 

ಇದನ್ನೂ ಓದಿ: ನೈಸ್ ಸಂಸ್ಥೆಯ ಅಕ್ರಮಗಳ ಕುರಿತು ವರದಿ: ಮಾಜಿ ಸಚಿವ ಟಿಬಿ ಜಯಚಂದ್ರಗೆ ಬೆದರಿಕೆ ಕರೆಗಳು

ಉದ್ಘಾಟನೆ ಆದಾಗಿನಿಂದ ಬೆಂಗಳೂರು – ಮೈಸೂರು ಎಕ್ಸ್​ಪ್ರೆಸ್ ವೇ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ಈ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್​ನಂತಹ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿತ್ತು.

ಇತ್ತೀಚೆಗೆ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ @siddaramaiah ಅವರು ಇಂದು ಮಂಡ್ಯ ಸಮೀಪದ ಅಮರಾವತಿ ಹೋಟೆಲ್ ಬಳಿ (ಬೆಂಗಳೂರಿನಿಂದ 93 km ಅಂತರ) ರಸ್ತೆ ಪರಿಶೀಲನೆ ನಡೆಸಿ, ಅಪಘಾತ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿದರು. pic.twitter.com/EaRX1EvksG
— CM of Karnataka (@CMofKarnataka) July 29, 2023

ಎಕ್ಸ್​ಪ್ರೆಸ್ ವೇಯಲ್ಲಿ ಅಪಘಾತ ತಡೆಗೆ ಪೊಲೀಸ್ ಇಲಾಖೆ ತೆಗೆದುಕೊಂಡ ಕ್ರಮಗಳು, ಅತಿ ವೇಗದ ಚಾಲನೆ ಗುರುತಿಸಿ ಸಂಚಾರ ನಿಯಮ ಉಲ್ಲಂಘನೆಗೆ ದಂಡ ಹಾಕಲು ಕ್ಯಾಮರಾಗಳ ಅಳವಡಿಕೆ ಕ್ರಮಗಳ ಕುರಿತಂತೆ ಮುಖ್ಯಮಂತ್ರಿಗಳು ಪರಿಶೀಲಿಸಿದ್ದಾರೆ.

 

LEAVE A REPLY

Please enter your comment!
Please enter your name here