Bengaluru-Mysore Expressway additional work at a cost of Rs 158.81 crore: Chief Minister Siddaramaiah
ಮಂಡ್ಯ/ಬೆಂಗಳೂರು:
ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ ಕೆಲಸ ಪ್ರಾರಂಭವಾಗಲಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇತ್ತೀಚೆಗೆ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ @siddaramaiah ಅವರು ಇಂದು ಮಂಡ್ಯ ಸಮೀಪದ ಅಮರಾವತಿ ಹೋಟೆಲ್ ಬಳಿ (ಬೆಂಗಳೂರಿನಿಂದ 93 km ಅಂತರ) ರಸ್ತೆ ಪರಿಶೀಲನೆ ನಡೆಸಿ, ಅಪಘಾತ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿದರು. pic.twitter.com/EaRX1EvksG
— CM of Karnataka (@CMofKarnataka) July 29, 2023
ಬೆಂಗಳೂರು, ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಡಿಟೆಕ್ಟರ್ ಗಳನ್ನು ಅಳವಡಿಸಿರಲಿಲ್ಲ. ಹಾಗಾಗಿ ಅಪಘಾತಗಳು ಹೆಚ್ಚಾಗಿದ್ದವು. ಜುಲೈ ತಿಂಗಳಲ್ಲಿ ಅಪಘಾತಗಳು ಕಡಿಮೆ ಯಾಗಿವೆ. ಜೂನ್ ತಿಂಗಳಲ್ಲಿ 20 ಅಪಘಾತಗಳಾಗಿದ್ದರೆ, ಜುಲೈನಲ್ಲಿ 5 ಅಪಘಾತಗಳು ಸಂಭವಿಸಿವೆ. ಸ್ಪೀಡ್ ಡಿಟೆಕ್ಟರ್ ಗಳನ್ನು 10 ಕಿಮೀ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯ. ಮುಖ್ಯ ಕಾರ್ಯದರ್ಶಿಗಳು ಎನ್.ಹೆಚ್.ಎ. ಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಎಕ್ಸ್ ಪ್ರೆಸ್ ವೇ ನಲ್ಲಿ ಕೆಲವು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು ಅದಕ್ಕಾಗಿಯೇ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು,ಮಂಡ್ಯ, ಶ್ರೀರಂಗಪಟ್ಟಣ, ಬೈಪಾಸ್ ರಸ್ತೆಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರವೇಶ ಮತ್ತು ನಿರ್ಗಮನ ರಸ್ತೆಗಳನ್ನು ಮಾರ್ಚ್ ಮಾಹೆಯೊಳಗೆ ಪೂರ್ಣ ಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಟೋಲ್ ಸಂಗ್ರಹ: ಕೇಂದ್ರ ಹೆದ್ದಾರಿ ಸಚಿವರೊಂದಿಗೆ ಚರ್ಚೆ
