
Bus accident at Bengaluru airport: 10 passengers injured
ಬೆಂಗಳೂರು:
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸ್ ವೊಂದು ಅಪಘಾತಕ್ಕೀಡಾಗಿ, 10 ಮಂದಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ.
ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಟರ್ಮಿನಲ್ 2 ನಡುವೆ ಕಾರ್ಯನಿರ್ವಹಿಸುತ್ತಿದ್ದ ಶಟಲ್ ಬಸ್ ಇಂದು ಬೆಳಿಗ್ಗೆ 5.15ರ ಸುಮಾರಿಗೆ ಟರ್ಮಿನಲ್ 2 ಆಗಮನ ನಿರ್ಗಮನ ರಸ್ತೆಯ ಬಳಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 10 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಘಟನೆ ವೇಳೆ ಬಸ್ಸಿನಲ್ಲಿ ಒಟ್ಟು 17 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಬಸ್ಸಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ.
ಗಾಯಾಳುಗಳಿಗೆ ವಿಮಾನ ನಿಲ್ದಾಣದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.