Home ಕರ್ನಾಟಕ ಬೆಂಗಳೂರು | ಹೆಜ್ಜಾಲ ಚೆಕ್‍ಪೋಸ್ಟ್ ನಲ್ಲಿ 5.36 ಕೋಟಿ ರೂ.ನಗದು ವಶ

ಬೆಂಗಳೂರು | ಹೆಜ್ಜಾಲ ಚೆಕ್‍ಪೋಸ್ಟ್ ನಲ್ಲಿ 5.36 ಕೋಟಿ ರೂ.ನಗದು ವಶ

39
0

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಹೆಜ್ಜಾಲ ಚೆಕ್‍ಪೋಸ್ಟ್ ಬಳಿ ಪೊಲೀಸರು 5.36 ಕೋಟಿ ರೂ.ನಗದು ವಶಪಡಿಸಿ ಕೊಂಡಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿಯ ಪ್ರಕಟಣೆ ತಿಳಿಸಿದೆ.

ಇದಲ್ಲದೆ, ಬಳ್ಳಾರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹೊಸಪೇಟೆ ಟೌನ್ ಠಾಣಾ ಪೊಲೀಸರು 30.45 ಲಕ್ಷ ರೂ.ಮೌಲ್ಯದ 203 ಕೆಜಿ ಶ್ರೀಗಂಧವನ್ನು, ಮಯೂಸರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹುಣಸೂರು ಎಸ್‍ಎಸ್‍ಟಿಯವರು 15.96 ಲಕ್ಷ ರೂ.ನಗದು ಹಾಗೂ ಬಳ್ಳಾರಿ ಪೊಲೀಸ್ ಠಾಣೆಯವರು 26 ಲಕ್ಷ ರೂ.ನಗದು ವಶಪಡಿಸಿಕೊಂಡಿದ್ದಾರೆ.

ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತ ಉಡುಗೊರೆ ವಶಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ 496 ಎಫ್‍ಐಆರ್ ಗಳನ್ನು ದಾಖಲಿಸಿದ್ದಾರೆ.

72,627 ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಲಾಗಿದೆ. 836 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 8 ಶಸ್ತ್ರಾಸ್ತ್ರಗಳ ಪರವಾನಗಿಯನ್ನು ರದ್ದುಪಡಿಸಲಾಗಿದೆ. ಸಿಆರ್‍ಪಿಸಿಯ ತಡೆಗಟ್ಟುವ ವಿಭಾಗಗಳ ಅಡಿಯಲ್ಲಿ 4,175 ಪ್ರಕರಣಗಳನ್ನು ದಾಖಲಿಸಲಾಗಿದೆ.

ಅಬಕಾರಿ ಇಲಾಖೆಯು ಘೋರ ಅಪರಾಧ ಅಡಿಯಲ್ಲಿ 552 ಪ್ರಕರಣಗಳನ್ನು ದಾಖಲಿಸಿದೆ. ಪರವಾನಗಿ ಉಲ್ಲಂಘನೆ ಅಡಿಯಲ್ಲಿ 430 ಪ್ರಕರಣ ದಾಖಲಿಸಿದೆ. ಎನ್‍ಡಿಪಿಎಸ್ ಅಡಿಯಲ್ಲಿ 29 ಪ್ರಕರಣಗಳನ್ನು ಮತ್ತು ಕರ್ನಾಟಕ ಅಬಕಾರಿ ಕಾಯ್ದೆ ಅಡಿ 1,815 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 329 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here