Home ಕರ್ನಾಟಕ ಬೆಂಗಳೂರು | ಹೋಟೆಲ್‍ಗಳಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ : ಮೂವರ ಬಂಧನ

ಬೆಂಗಳೂರು | ಹೋಟೆಲ್‍ಗಳಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ : ಮೂವರ ಬಂಧನ

32
0

ಬೆಂಗಳೂರು : ನಗರದ ಹೋಟೆಲ್‍ಗಳಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಈಶಾನ್ಯ ವಿಭಾಗದ ಮಹಿಳಾ ಠಾಣೆ ಪೂಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಆರೋಪಿಗಳಿಂದ 13 ಮೊಬೈಲ್‍ಗಳು, 1 ಆಕ್ಟೀವಾ ಸ್ಕೂಟರ್, ಟಯೋಟಾ ಇಟಿಯಾಸ್ ಕಾರು ಹಾಗೂ 30 ಸಾವಿರ ರೂ. ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಮೊಬೈಲ್ ವೆಬ್‍ಸೈಟ್‍ಗಳನ್ನು ಬಳಸಿಕೊಂಡು ಸಾರ್ವಜನಿಕವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಾ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಈಶಾನ್ಯ ವಿಭಾಗದ ಉಪಪೂಲೀಸ್ ಆಯುಕ್ತ ಲಕ್ಷ್ಮೀಪ್ರಸಾದ್ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಗರದ ಹಲವು ಹೋಟೆಲ್‍ಗಳಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತಂತೆ ಮಾಹಿತಿ ಕಲೆಹಾಕಿ ಕೋರಮಂಗಲ, ಮಡಿವಾಳ ಹಾಗೂ ಇತರ ಪ್ರದೇಶಗಳಲ್ಲಿ ದಾಳಿ ಮಾಡಿ ಮೂವರನ್ನು ಬಂಧಿಸಿ ಮೂವರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

LEAVE A REPLY

Please enter your comment!
Please enter your name here