Home Uncategorized ಬೆಂಗಳೂರು: 4ನೇ ಮಹಡಿಯಿಂದ ಜಿಗಿದು ಗಗನಸಖಿ ಆತ್ಮಹತ್ಯೆ

ಬೆಂಗಳೂರು: 4ನೇ ಮಹಡಿಯಿಂದ ಜಿಗಿದು ಗಗನಸಖಿ ಆತ್ಮಹತ್ಯೆ

19
0

ಪ್ರಿಯಕರನನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ಗಗನಸಖಿಯೊಬ್ಬರು ಅಪಾರ್ಟ್ ಮೆಂಟ್‍ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ. ಬೆಂಗಳೂರು: ಪ್ರಿಯಕರನನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ಗಗನಸಖಿಯೊಬ್ಬರು ಅಪಾರ್ಟ್ ಮೆಂಟ್‍ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ.

ಹಿಮಾಚಲ ಪ್ರದೇಶದ 28 ವರ್ಷದ ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿರುವ ಗಗನಸಖಿ ಎಂದು ತಿಳಿದುಬಂದಿದೆ. ಅರ್ಚನಾ ಸಾಫ್ಟ್ ವೇರ್ ಎಂಜಿನಿಯರ್ ಕೇರಳ ಮೂಲದ ಆದೇಶ್ ಎಂಬಾತನನ್ನು ಪ್ರೀತಿಸುತ್ತಿದ್ದು ಅದನ್ನು ಭೇಟಿಯಾಗಲು ನಿನ್ನೆಯಷ್ಟೆ ಬೆಂಗಳೂರಿಗೆ ಬಂದಿದ್ದು ತಡರಾತ್ರಿ 12 ಗಂಟೆ ಸುಮಾರಿನಲ್ಲಿ ಅರ್ಚನಾ ಅಪಾರ್ಟ್ ಮೆಂಟ್‍ನ 4ನೇ ಮಹಡಿಗೆ ಹೋಗಿ ಅಲ್ಲಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಬಹಿಷ್ಕಾರ ಪ್ರಕರಣ; 12 ಮಂದಿ ಬಂಧನ 

ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಸೇಂಟ್‍ಜಾನ್ ಆಸ್ಪತ್ರೆಗೆ ರವಾನಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರಕರಣ ಸಂಬಂಧ ಆದೇಶ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here