Home Uncategorized ಬೆಳಗಾವಿಗೆ ಬರುತ್ತಿದ್ದೇನೆ, ಸೂಕ್ತ ಭದ್ರತೆ ಕೊಡಿ; ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮಹಾ ಸಂಸದ ಧೈರ್ಯಶೀಲ ಮಾನೆ...

ಬೆಳಗಾವಿಗೆ ಬರುತ್ತಿದ್ದೇನೆ, ಸೂಕ್ತ ಭದ್ರತೆ ಕೊಡಿ; ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮಹಾ ಸಂಸದ ಧೈರ್ಯಶೀಲ ಮಾನೆ ಪತ್ರ

10
0

ಬೆಳಗಾವಿ: ನಾಳೆಯಿಂದ(ಡಿ 19) ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ(Belagavi Winter Session) ಶುರುವಾಗುತ್ತಿದೆ. ಈ ಹಿನ್ನೆಲೆ ಮಹಾರಾಷ್ಟ್ರ ಶಿವಸೇನೆ ಸಂಸದ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸಕ್ಕೆ ಮುಂದಾಗಿದ್ದಾರೆ. ಕೇಂದ್ರ ಗೃಹ ಸಚಿವರ ಹೇಳಿಕೆ ಬಳಿಕವೂ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಮಾನೆ(Dhairyasheel Sambhajirao Mane) ಬೆಳಗಾವಿಗೆ ಬರುವುದಾಗಿ ಪತ್ರ ಬರೆದಿದ್ದಾರೆ. ಎಂಇಎಸ್​ ಮಹಾಮೇಳಾವ್​ಗೆ ಬರುತ್ತಿದ್ದೇನೆ.ಸೂಕ್ತ ಭದ್ರತೆ ನೀಡುವಂತೆ ಸಂಸದ ಧೈರ್ಯಶೀಲ ಮಾನೆ ಬೆಳಗಾವಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಪತ್ರದ ಜತೆ ತಮ್ಮ ಪ್ರವಾಸದ ಪಟ್ಟಿಯನ್ನೂ ಲಗತ್ತಿಸಿದ್ದಾರೆ. ಆದ್ರೆ ಮಹಾಮೇಳಾವ್​ಗೆ ಅನುಮತಿ ನೀಡದಂತೆ ಕನ್ನಡ ಸಂಘಟನೆಗಳು ಆಗ್ರಹಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಕರ್ನಾಟಕ-ಮಹಾರಾಷ್ಟ್ರ ಸಿಎಂಗಳ ಜತೆಗೆ ಸಭೆ ನಡೆದಿತ್ತು. ಸಭೆಯಲ್ಲಿ ಗಡಿ ತಂಟೆ ಶಮನ ಮಾಡುವ ಯತ್ನ ನಡೆದಿತ್ತು. ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಎರಡು ರಾಜ್ಯ ಶಾಂತಿ ಕಾಪಾಡುವಂತೆ ನಿರ್ದೇಶನ ನೀಡಿದ್ದರು.ಅಮಿತ್ ಶಾ ನಿರ್ದೇಶನದ ಬಳಿಕವೂ ಮಹಾರಾಷ್ಟ್ರ ನಾಯಕರ ಉದ್ಧಟತನ ಮೆರೆಯುತ್ತಿದ್ದಾರೆ. ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಮಾನೆ ಬೆಳಗಾವಿ ಜಿಲ್ಲಾ ಪ್ರವಾಸಕ್ಕೆ ಮುಂದಾಗಿದ್ದಾರೆ.ಎಂಇಎಸ್ ಆಯೋಜನೆ ಮಾಡುವ ಮಹಾಮೇಳಕ್ಕೆ ಆಗಮಿಸುತ್ತಿರುವುದಾಗಿ ಪತ್ರ ಬರೆದಿದ್ದಾರೆ.

ಕರ್ನಾಟಕ ವಿಧಾನ ಮಂಡಲ ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್‌ ಈ ಮಹಾ ಮೇಳಾವ್‌ ಮಾಡುತ್ತಿದೆ. ನಗರದ ವ್ಯಾಕ್ಸಿನ್‌ ಡಿಪೊದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಧೈರ್ಯಶೀಲ ಭಾಷಣ ಮಾಡಲಿದ್ದಾರೆ.

ಇದನ್ನೂ ಓದಿ: ಈತ ಸನ್ನಿ ಲಿಯೋನಿ ಮಗನಾ ಅಥವಾ ಬೇರೆಯವರ ಮಗನಾ? ಜಾಗೋ ಹಿಂದೂ ಸಮಾವೇಶದಲ್ಲಿ ನಾಲಿಗೆ ಹರಿಬಿಟ್ಟ ಹಿಂದೂ ಮುಖಂಡ ಧನಂಜಯ್

ಪೊಲೀಸರಿಂದ ವರದಿ ಕೇಳಿದ ಬೆಳಗಾವಿ ಡಿಸಿ ನಿತೇಶ್ ಪಾಟೀಲ್​

ಇನ್ನು ನಾಳೆ ಬೆಳಗಾವಿಗೆ ಮಹಾರಾಷ್ಟ್ರ ಸಂಸದ ಮಾನೆ ಭೇಟಿ ವಿಚಾರಕ್ಕೆ ಸಂಬಂಧಿಸಿ ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಪೊಲೀಸರಿಂದ ವರದಿ ಕೇಳಿದ್ದಾರೆ. ಸಂಸದ ಧೈರ್ಯಶೀಲ ಮಾನೆ ಭೇಟಿ ಕುರಿತು ವರದಿ ನೀಡಲು ಬೆಳಗಾವಿ ಪೊಲೀಸ್ ಆಯುಕ್ತ, ಎಸ್​ಪಿಗೆ ಸೂಚಿಸಿದ್ದಾರೆ.

ಮಹಾರಾಷ್ಟ್ರ ಸಂಸದರ ಭೇಟಿಗೆ ಅನುಮತಿ ನೀಡಬೇಕಾ? ಬೇಡವಾ? ಎಂಬ ಬಗ್ಗೆ ಹಾಗೂ ಕಾನೂನು ಸುವ್ಯವಸ್ಥೆ ಬಗ್ಗೆಯೂ ವರದಿ ನೀಡುವಂತೆ ಸೂಚಿಸಿದ್ದಾರೆ.ವರದಿ ಬಳಿಕ ಮಾನೆ ಗಡಿ ಪ್ರವೇಶಕ್ಕೆ ಅನುಮತಿ ನಿರಾಕರಿಸುವ ಸಾಧ್ಯತೆ ಇದೆ. ನಾಳೆ ಬೆಳಗ್ಗೆ 11:30ಕ್ಕೆ ಧೈರ್ಯಶೀಲ ಮಾನೆ ಬೆಳಗಾವಿಗೆ ಆಗಮಿಸಲಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here