Home Uncategorized ಬೆಳಗಾವಿಯಲ್ಲಿ ಯುವಕನ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬೆಳಗಾವಿಯಲ್ಲಿ ಯುವಕನ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

37
0

ಮಾರಿಹಾಳ ಸರ್ಕಾರಿ ಶಾಲೆ ಆವರಣದಲ್ಲಿ ಯುವಕನೊಬ್ಬನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಾರಿಹಾಳ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬೆಳಗಾವಿ: ಮಾರಿಹಾಳ ಸರ್ಕಾರಿ ಶಾಲೆ ಆವರಣದಲ್ಲಿ ಯುವಕನೊಬ್ಬನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಾರಿಹಾಳ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ತಾಲೂಕಿನ ಸುಳೇಭಾವಿ ನಿವಾಸಿ ಅಕ್ಷಯ ಕುಮಾರ್ ಕೊಣಕೇರಿ (23), ಮಾರಿಹಾಳ ನಿವಾಸಿ ರಾಜೇಸಾಬ್ ಮುಲ್ಲಾ (23) ಬಂಧಿತ ಆರೋಪಿಗಳಾಗಿದ್ದಾರೆ.

ಶುಕ್ರವಾರ ಬೆಳಗ್ಗೆ ಮಾರಿಹಾಳ ಸರ್ಕಾರಿ ಶಾಲೆಯ ಕೊಠಡಿ ಎದುರು ಮಹಾಂತೇಶ ಕರಲಿಂಗಣ್ಣವರ್ (24) ಅವರ ಮೃತದೇಹ ಪತ್ತೆಯಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮಾರಿಹಾಳ ಪೊಲೀಸರು ತನಿಖೆ ಕೈಗೊಂಡಿದ್ದರು.

ನಾಲ್ಕು ದಿನಗಳ ಹಿಂದೆ ಕೊಲೆಯಾದ ಮಹಾಂತೇಶ ಹಾಗೂ ಆರೋಪಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿತ್ತು. ಈ ವೇಳೆ ಕೊಲೆಯಾದ ಮಹಾಂತೇಶ್ ರಾಜೇಸಾಬ್‌ಗೆ ಧಮ್ಕಿ ಹಾಕಿದ್ದ. ಇದೇ ವೈಷಮ್ಯವಿಟ್ಟುಕೊಂಡು ಇಬ್ಬರು ಆರೋಪಿಗಳು ಮಹಾಂತೇಶ್‌ನನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

ಮೇ 18ರ ರಾತ್ರಿ ಶಾಲಾ ಕೊಠಡಿ ಎದುರು ಕುಳಿತಿದ್ದ ಮಹಾಂತೇಶ್‌ನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು.

LEAVE A REPLY

Please enter your comment!
Please enter your name here