ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಕೆಎಸ್ ಗ್ರಾಮದಲ್ಲಿ ಭಾನುವಾರ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಶೆಡ್ ಮೇಲೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.
ಬೆಳಗಾವಿ: ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಕೆಎಸ್ ಗ್ರಾಮದಲ್ಲಿ ಭಾನುವಾರ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಶೆಡ್ ಮೇಲೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.
ಕಬ್ಬು ತುಂಬಿದ್ದ ಎರಡು ಟ್ರಾಲಿಗಳನ್ನು ಟ್ರ್ಯಾಕ್ಟರ್ ಎಳೆದುಕೊಂಡು ಹೋಗುತ್ತಿದ್ದಾಗ ರಸ್ತೆ ತಿರುವಿನಲ್ಲಿ ಅಜ್ಜಪ್ಪ ಬಡಿಗೇರ್ ಎಂಬುವವರ ಒಡೆತನದ ಶೆಡ್ ಮೇಲೆ ಬಿದ್ದಿದೆ. ಶೆಡ್ ಕುಸಿದು ಮಹಿಳೆ ಸಾವಿಗೀಡಾಗಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ.
ಮೃತರನ್ನು ಗಂಗವ್ವ ಕಮ್ಮಾರ್ (62) ಎಂದು ಗುರುತಿಸಲಾಗಿದೆ. ಅಲ್ಲದೇ ಮನೆಯೊಳಗೆ ಕಟ್ಟಿದ್ದ ಆರು ಮೇಕೆಗಳು ಅಪಘಾತದಲ್ಲಿ ಮೃತಪಟ್ಟಿವೆ.