ಬೆಳಗಾವಿಯ ಚಿಕ್ಕೋಡಿಯಲ್ಲಿ ಜೈನ ಮುನಿಗಳಾದ ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಣದ ಸಮಗ್ರ ತನಿಖೆಗೆ ಕರ್ನಾಟಕ ಬಿಜೆಪಿ ಭಾನುವಾರ ಒತ್ತಾಯಿಸಿದೆ. ಬೆಂಗಳೂರು: ಬೆಳಗಾವಿಯ ಚಿಕ್ಕೋಡಿಯಲ್ಲಿ ಜೈನ ಮುನಿಗಳಾದ ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಣದ ಸಮಗ್ರ ತನಿಖೆಗೆ ಕರ್ನಾಟಕ ಬಿಜೆಪಿ ಭಾನುವಾರ ಒತ್ತಾಯಿಸಿದೆ.
ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ತುಂಡು ತುಂಡಾಗಿ ಕತ್ತರಿಸಿ, ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಿಷ್ಕ್ರಿಯಗೊಂಡ ಬೋರ್‌ವೆಲ್‌ನಲ್ಲಿ ದೇಹದ ತುಂಡುಗಳನ್ನು ಎಸೆಯಲಾಗಿತ್ತು.
ಈ ಸಂಬಂಧ ಈಗಾಗಲೇ ನಾರಾಯಣ ಬಸಪ್ಪ ಮಡಿ ಹಾಗೂ ಹಾಸನದ ದಲಾಯತ್ ಎಂಬಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹಣದ ವಿಚಾರದಲ್ಲಿ ಕೊಲೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾನುವಾರ ಘಟನೆಯನ್ನು ಖಂಡಿಸಿದ್ದಾರೆ ಮತ್ತು ಅಪರಾಧಕ್ಕೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ರಾಜ್ಯದ ಮಠಾಧೀಶರು ಹಾಗೂ ಸಂತರಿಗೆ ಭದ್ರತೆ ಒದಗಿಸಬೇಕು ಎಂದು ಕಟೀಲ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ಇದನ್ನೂ ಓದಿ: ಜೈನ ಮುನಿ ಹಂತಕರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್
ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ವಕ್ತಾರ ಹಾಗೂ ಎಂಎಲ್‌ಸಿ ಎನ್. ರವಿಕುಮಾರ್, ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಸಾಧ್ಯತೆಗಳಿದ್ದು, ಸೂಕ್ತ ತನಿಖೆ ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.
ಇದನ್ನೂ ಓದಿ: ವಿದ್ಯುತ್ ಶಾಕ್ ಕೊಟ್ಟು, ಅಂಗಾಂಗ ಕತ್ತರಿಸಿ ಜೈನ ಮುನಿಯ ಬರ್ಬರ ಹತ್ಯೆ!
ಇದೇ ವೇಳೆ ಭಾನುವಾರ ಹಿರೇಕೋಡಿ ಗ್ರಾಮದಲ್ಲಿ ಜೈನ ಸಂಪ್ರದಾಯದಂತೆ ಜೈನ ಮುನಿಗಳ ಅಂತಿಮ ಸಂಸ್ಕಾರ ನೆರವೇರಿತು.