Belagavi: Six members of one family died in a terrible road accident | ಭೀಕರ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರದ ಒಂದೇ ಕುಟುಂಬದ ಆರು ಮಂದಿ ಮೃತ್ಯು
ಬೆಳಗಾವಿ : ಮದುವೆ ಮುಗಿಸಿ ಹಿಂದಿರುಗುವ ವೇಳೆ ಕಾರು ಮರಕ್ಕೆ ಢಿಕ್ಕಿ ಹೊಡೆದು ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದಲ್ಲಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟವರನ್ನು ಮಹಾರಾಷ್ಟ್ರ ಮೂಲದ ಆರು ಜನ ಎಂದು ಗೊತ್ತಾಗಿದೆ. ಮದುವೆ ಮುಗಿಸಿ ಮನೆಗೆ ಹೋಗುವಾಗ ಸ್ವಿಫ್ಟ್ ಕಾರು ಚಾಲಕನ ನಿಯಂತ್ರನ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ ಎಂದು ಮೂಲಗಳು ತಿಳಿಸಿವೆ.
ಕಾರಿನಲ್ಲಿದ್ದ 9 ಜನರ ಪೈಕಿ 6 ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಹೆಸರು, ವಿಳಾಸ ಸದ್ಯಕ್ಕೆ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ್, ನಂದಗಡ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
