Home ಕರ್ನಾಟಕ ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಪೊಲೀಸ್ ದಾಳಿ; ಪರಿಶೀಲನೆ

ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಪೊಲೀಸ್ ದಾಳಿ; ಪರಿಶೀಲನೆ

49
0

ಬೆಳಗಾವಿ, ಮಾ.31: ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರು ಇಂದು ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಹಿಂಡಲಗಾ ಜೈಲಿನಲ್ಲಿ ವ್ಯಾಪಕವಾಗಿ ಅಕ್ರಮ ಚಟುವಟಿಕೆ ನಡೆಯುತ್ತಿವೆ. ಕೈದಿಗಳು ಮೊಬೈಲ್ ಫೋನ್, ಟಿವಿ ಬಳಸುತ್ತಿದ್ದಾರೆ ಎಂಬ ಆರೋಪ ಇತ್ತೀಚೆಗೆ ಕೇಳಿ ಬಂದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಉಪ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ರೋಹನ್ ಜಗದೀಶ್ ನೇತೃತ್ವದಲ್ಲಿ ಪೊಲೀಸರಿಂದ ದಾಳಿ ನಡೆಯಿತು.

ಒಂದು ಗಂಟೆಗೂ ಅಧಿಕ ಸಮಯ ಶ್ವಾನದಳದ ನೆರವಿನೊಂದಿಗೆ ಕಾರಾಗೃಹದಲ್ಲಿ ತಪಾಸಣೆ ಮಾಡಲಾಯಿತು. ಈ ವೇಳೆ ಮೊಬೈಲ್ ಚಾರ್ಜರ್, ಬ್ಲ್ಯೂಟೂಥ್ ಡಿವೈಸ್ ತಂಬಾಕು, ಸಿಗರೇಟ್ ಪ್ಯಾಕ್ ಗಳು ಸಿಕ್ಕಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here