Home Uncategorized ಬೆಳಗಾವಿ: 70 ರೌಡಿ ಶೀಟರ್‌ಗಳ ಮನೆ ಮೇಲೆ ಪೊಲೀಸರ ದಾಳಿ

ಬೆಳಗಾವಿ: 70 ರೌಡಿ ಶೀಟರ್‌ಗಳ ಮನೆ ಮೇಲೆ ಪೊಲೀಸರ ದಾಳಿ

30
0

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ನಗರದಲ್ಲಿ ಪೊಲೀಸರು ರೌಡಿ ಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದು ಈ ವೇಳೆ ಒಬ್ಬ ರೌಡಿ ಶೀಟರ್ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಬೆಳಗಾವಿ: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ನಗರದಲ್ಲಿ ಪೊಲೀಸರು ರೌಡಿ ಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದು ಈ ವೇಳೆ ಒಬ್ಬ ರೌಡಿ ಶೀಟರ್ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ.

ನಗರದ 12 ಪೊಲೀಸ್ ಠಾಣೆಗಳ ವ್ಯಾಪ್ತಿಯ ಸುಮಾರು 70 ರೌಡಿ ಶೀಟರ್ ಗಳ ಮನೆಗೆ ಪೊಲೀಸರು ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಚ್.ಟಿ ಶೇಖರ್ ನೇತೃತ್ವದಲ್ಲಿ ಏಕಕಾಲಕ್ಕೆ ಹಠಾತ್ ದಾಳಿ ನಡೆಸಿದರು. ಖಡೇಬಜಾರ್ ಠಾಣೆ ಎಸಿಪಿಗಳು ಮತ್ತು ಪಿಎಸ್ ಐಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ದಾಳಿ ವೇಳೆಗೆ ಖಡೇಬಜಾರ್ ಪೊಲೀಸ್ ಠಾಣೆ ರೌಡಿ ಶೀಟರ್ ಒಬ್ಬನ ಮನೆಯಲ್ಲಿ ಎರಡು ತಲವಾರುಗಳು ಪತ್ತೆಯಾಗಿದ್ದು ಅವುಗಳನ್ನು ವಶಕ್ಕೆ ಪಡೆದು ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎಲ್ಲ ರೌಡಿ ಶೀಟರ್ ಗಳಿಗೆ ಎಚ್ಚರಿಕೆ ಸಂದೇಶ ನೀಡಿರುವ ಪೊಲೀಸರು ಚುನಾವಣೆ ಸಂದರ್ಭದಲ್ಲಿ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದರು.

ಚುನಾವಣಾ ಸಮಯದಲ್ಲಿ ಯಾವುದೇ ರೀತಿಯ ಹಿಂಸಾಚಾರ ಅಥವಾ ಕಾನೂನು ಉಲ್ಲಂಘನೆಯನ್ನು ಬಯಸುವುದಿಲ್ಲ ಮತ್ತು ಆದ್ದರಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿಯಾದ್ಯಂತ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿರುವ ಪೋಲೀಸರು ಅಗತ್ಯವಿರುವ ಕಡೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ನಗರದ ವಿವಿಧ ರಸ್ತೆಗಳಲ್ಲಿ ಪೊಲೀಸರು ಧ್ವಜ ಮೆರವಣಿಗೆ ನಡೆಸಿದರು. ಯಾವುದೇ ಭಯವಿಲ್ಲದೆ ತಮ್ಮ ಹಕ್ಕು ಚಲಾಯಿಸಲು ಮತದಾರರಲ್ಲಿ ವಿಶ್ವಾಸ ಮೂಡಿಸಲು ಧ್ವಜ ಮೆರವಣಿಗೆ ನಡೆಸಲಾಯಿತು ಎಂದು ಹೇಳಿದ್ದಾರೆ. ವಿಶೇಷವಾಗಿ ಚುನಾವಣಾ ಸಮಯದಲ್ಲಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

LEAVE A REPLY

Please enter your comment!
Please enter your name here