ನಾಳೆ ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 8 ಕೋಟಿಗೂ ಹೆಚ್ಚಿನ ರೈತರ ಖಾತೆಗಳಿಗೆ 13ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ. ನವದೆಹಲಿ/ಬೆಳಗಾವಿ: ನಾಳೆ ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 8 ಕೋಟಿಗೂ ಹೆಚ್ಚಿನ ರೈತರ ಖಾತೆಗಳಿಗೆ 13ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ.
ಇದನ್ನೂ ಓದಿ: ನಾಳೆ ಶಿವಮೊಗ್ಗ, ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ: ಹಲವು ಯೋಜನೆಗಳಿಗೆ ಚಾಲನೆ
ಭಾರತೀಯ ರೈಲ್ವೆ, ಜಲಜೀವನ್ ಮಿಷನ್ ಜೊತೆಗೆ ಪಿಎಂ ಕಿಸಾನ್ ಯೋಜನೆಯ 8 ಕೋಟಿಗೂ ಅಧಿಕ ರೈತರ ಖಾತೆಗಳಿಗೆ ತಲಾ 2 ಸಾವಿರದಂತೆ ಒಟ್ಟಾರೆ ರೂ. 16,800 ಕೋಟಿ ಹಣವನ್ನು ನೇರವಾಗಿ ವರ್ಗಾವಣೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.