ಬೆಳ್ತಂಗಡಿ: ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 58/2024, ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಷನ್ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ತಿಳಿಸಿದ್ದಾರೆ.