ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 5 ವರ್ಷ ಮೇಲ್ಪಟ್ಟವರಿಗೆ ಎಪ್ರಿಲ್ 1 ರಿಂದ 21ರವರೆಗೆ ಹಾಗೂ ಎಪ್ರಿಲ್ 22ರಿಂದ ಮೇ 12ರವರೆಗೆ ಎರಡು ಹಂತದಲ್ಲಿ ಈಜು, ಶಟ್ಲ್ ಬ್ಯಾಡ್ಮಿಂಟನ್, ಲಾನ್ ಟೆನಿಸ್, ಅಥ್ಲೆಟಿಕ್ಸ್ ಹಾಗೂ ಬಾಸ್ಕೆಟ್ ಬಾಲ್ ಕ್ರೀಡಾ ವಿಭಾಗದಲ್ಲಿ ಬೇಸಿಗೆ ತರಬೇತಿ ಶಿಬಿರಗಳನ್ನು ಆಯೋಜಿಸ ಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 9845432303, 9480886467ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.