ಬೆಂಗಳೂರು : 2024-25 ಸಾಲಿನ ಬಿಬಿಎಂಪಿ ಬಜೆಟ್‍ನಲ್ಲಿ ‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಯಿಂದ ಹೊಸ ಮತ್ತು ದೀರ್ಘಾವಧಿ ಮುಂದಾಲೋಚನೆಯ ಸಮಗ್ರ ಬೆಂಗಳೂರು ಅಭಿವೃದ್ಧಿಗೆ ಅಡಿಗಲ್ಲು ಹಾಕಲು ಬಿಬಿಎಂಪಿ ಮುಂದಾಗಿದೆ. ಬಜೆಟ್‍ನಲ್ಲಿ ಒಟ್ಟು 1,580 ಕೋಟಿ ರೂ.ಗಳನ್ನು ಬ್ಯಾಂಡ್ ಬೆಂಗಳೂರು ಯೋಜನೆಗಾಗಿ ಮೀಸಲಿರಿಸಲಾಗಿದೆ.
‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಯನ್ನು ಎಂಟು ವಿಭಾಗಗಳಲ್ಲಿ ವಿಂಗಡಿಸಿ, ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಸುಗುಮ ಸಂಚಾರ ಬೆಂಗಳೂರು, ಸ್ವಚ್ಛ ಬೆಂಗಳೂರು, ಹಸಿರು ಬೆಂಗಳೂರು, ಆರೋಗ್ಯಕರ ಬೆಂಗಳೂರು, ಶಿಕ್ಷಣ ಬೆಂಗಳೂರು, ಟೆಕ್ ಬೆಂಗಳೂರು, ವೈಬ್ರೆಂಟ್(ರೋಮಾಂಚನ) ಬೆಂಗಳೂರು ಮತ್ತು ನೀರಿನ ಭದ್ರತೆ ಬೆಂಗಳೂರು ವಿಭಾಗಗಳಿಗೆ 1,580 ಕೋಟಿ ರೂ. ಹಂಚಿಕೆ ಮಾಡಲಾಗಿದೆ.