ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ವೀರಯೋಧ ದಿ.ಕ್ಯಾಪ್ಟನ್ ಎಂವಿ ಪ್ರಾಂಜಲ್ ಗೌರವಾರ್ಥ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ನಡೆದ ರಾಜ್ಯಮಟ್ಟದ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ರವಿವಾರ ಬೆಂಗಳೂರು ನಗರ ಪತ್ರಕರ್ತರ ಕ್ರಿಕೆಟ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಜ.5ರಿಂದ 7 ರವರೆಗೆ ನಡೆದ ಟೂರ್ನಮೆಂಟ್‌ನ ಫೈನಲ್‌ನಲ್ಲಿ ಬೆಂಗಳೂರು ನಗರ ಕಾರ್ಯನಿರತ ಪತ್ರಕರ್ತರ ತಂಡವು ಹಾಸನ ಕಾರ್ಯನಿರತ ಪತ್ರಕರ್ತರ ಕ್ರಿಕೆಟ್ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಬಾಚಿಕೊಂಡಿತು.
ಹಾಸನ ತಂಡ ದ್ವಿತೀಯ ಸ್ಥಾನ ಪಡೆಯಿತು ಹಾಗೂ ಮಂಡ್ಯ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ತಂಡ ತೃತೀಯ ಸ್ಥಾನದೊಂದಿಗೆ ಪ್ರಶಸ್ತಿ ಗಳಿಸಿದೆ. ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಶಸ್ತಿ ವಿತರಿಸಿದರು.
ಸಮಾರೋಪ ಸಮಾರಂಭದಲ್ಲಿ ವಿಧಾನ ಸಭಾ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಬೈರತಿ ಬಸವರಾಜು, ಮಾಜಿ ಸಚಿವ ಬಿ.ರಮಾನಾಥ ರೈ,ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವ,ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ,ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಪ್ರತಾಪ್‌ಸಿಂಹ ನಾಯಕ್ , ಅದಾನಿ ಸಂಸ್ಥೆಯ ದಕ್ಷಿಣ ವಲಯ ಉಪಾಧ್ಯಕ್ಷ ಕಿಶೋರ್ ಆಳ್ವ, ಮಾಜಿ ದ.ಕ.ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಚರಿತ ಶೆಟ್ಟಿ, ಆರ್ಥಿಕ ತಜ್ಞ ಸಿ.ಅಬ್ದುಲ್ಲ ಮಾದುಮೂಲೆ , ರಾಜೀವ ಗಾಂಧಿ ಆರೋಗ್ಯ ವಿವಿ ಸಿಂಡಿಕೇಟ್ ಸದಸ್ಯ ಇಫ್ತಿಕಾರ್ ಅಲಿ, ಮೂಡಾ ಆಯುಕ್ತ ಮನ್ಸೂರ್ ಅಲಿ, ಆರ್ಥಿಕ ತಜ್ಞ ಸಿಎ ಅಬ್ದುಲ್ಲ ಮಾದುಮೂಲೆ, ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಭಾಸ್ಕರ್ ಕೆ, ಜಿಲ್ಲಾ ವಾರ್ತಾಧಿಕಾರಿ ಬಿಎ ಖಾದರ್ ಶಾ, ಮಹಾರಾಷ್ಟ್ರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್ , ಎಎಸ್‌ಐ ಗೋಪಾಲ್ ಕುಂದರ್,ನಮ್ಮ ಕುಡ್ಲ ನಿರ್ದೇಶಕ ಲೀಲಾಕ್ಷ ಕರ್ಕೇರಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಮ್ ಮತ್ತು ಸೋಮಶೇಖರ ಕೆರಗೋಡು, ಕೋಶಾಧಿಕಾರಿ ವಾಸುದೇವ ಹೊಳ್ಳ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ ಮತ್ತು ಇಬ್ರಾಹಿಂ ಅಡ್ಕಸ್ಥಳ, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆರ್ ರಾಮಕೃಷ್ಣ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕಾರ್ಯದರ್ಶಿ ವಿಜಯ ಕೋಟ್ಯಾನ್, ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜೇಶ್ ದಡ್ಡಂಗಡಿ, ವಿಲ್‌ಫ್ರೇಡ್ ಡಿ ಸೋಜ, ಮುಹಮ್ಮದ್ ಆರೀಫ್, ರಾಜೇಶ್ ಪೂಜಾರಿ,ಪ್ರಧಾನ ಸಂಚಾಲಕ ಅನ್ನು ಮಂಗಳೂರು ಮೊದಲಾದವರು ಉಪಸ್ಥಿತರಿದ್ದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.