ಬೆಂಗಳೂರು: ಮೈಸೂರಿನ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ಅವರಿಗೆ ವಿಶೇಷ ಕೋರ್ಟ್ ಶಾಕ್ ನೀಡಿದೆ. ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಆದೇಶಿದೆ.
ಆ ಮೂಲಕ ಬಂಧನದ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣಗೆ ಸಂಕಷ್ಟ ಬಂದಿದೆ. ತಮ್ಮ ಪುತ್ರನ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಬೇಕಾದ ಸಾಕ್ಷಿಗಳನ್ನ ಎಸ್ಐಟಿ ಪೊಲೀಸರು ಸಂಗ್ರಹಿಸಿದ್ದರು. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕಟಿಸಿದೆ.