ಅತ್ತಿಬೆಲೆ: ದೀಪಾವಳಿ ಹಬ್ಬ ಹತ್ತಿರದಲ್ಲಿ ಇರುವ ಕಾರಣ ಪಟಾಕಿಗಳನ್ನು ಸಂಗ್ರಹ ಮಾಡಲಾಗುತ್ತಿತ್ತು. ಭವಿಷ್ಯದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ನಿರೂಪಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮುಖ್ಯಮಂತ್ರಿಗಳ ಜತೆ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ನಡೆದ ಸ್ಥಳ ವೀಕ್ಷಣೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು “ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟೀಸ್ ನೀಡಿ ಸುರಕ್ಷತೆ ಪರಿಶೀಲನೆ ಮಾಡಲು ಸೂಚನೆ ನೀಡಲಾಗಿದೆ. ಇಡೀ ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಲಾಗುವುದು ಎಂದು ಹೇಳಿದರು.
30,000 ಸಾವಿರ ಕೆಜಿಯಷ್ಟು ಪಟಾಕಿ ಸಂಗ್ರಹವಿತ್ತೇ ಎನ್ನುವ ಪ್ರಶ್ನೆಗೆ ” ಗೋದಾಮಿನಲ್ಲಿ ಎಷ್ಟು ಪ್ರಮಾಣದಲ್ಲಿ ಸಂಗ್ರಹ ಇತ್ತು ಎಂಬುದು ಇನ್ನೂ ಅಂದಾಜಿಗೆ ಸಿಕ್ಕಿಲ್ಲ”. ತಮಿಳುನಾಡು ಹಾಗೂ ಕರ್ನಾಟಕ ಎರಡೂ ರಾಜ್ಯಗಳು ಒಟ್ಟಿಗೆ ಕೆಲಸ ಮಾಡುತ್ತಿದ್ದು. ಈಗಾಗಲೇ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳ ಆಸ್ಪತ್ರೆ ವೆಚ್ಚವನ್ನು ಸಹ ಸರ್ಕಾರ ಭರಿಸುತ್ತದೆ ಎಂದು ತಿಳಿಸಿದರು.
The post ಭವಿಷ್ಯದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ನಿರೂಪಣೆ: ಡಿಸಿಎಂ ಡಿ.ಕೆ.ಶಿವಕುಮಾರ್ appeared first on Ain Live News.