Home Uncategorized ಭಾಷಣದ ವೇಳೆ ಬುಲೆಟ್ ಪ್ರೂಫ್ ಗ್ಲಾಸ್ ತೆಗೆಸಿದ ಸಿಎಂ ಸಿದ್ದರಾಮಯ್ಯ

ಭಾಷಣದ ವೇಳೆ ಬುಲೆಟ್ ಪ್ರೂಫ್ ಗ್ಲಾಸ್ ತೆಗೆಸಿದ ಸಿಎಂ ಸಿದ್ದರಾಮಯ್ಯ

13
0

ಬೆಂಗಳೂರಿನ ಮಾಣೆಕ್​ ಶಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ಬೆಂಗಳೂರು: ಬೆಂಗಳೂರಿನ ಮಾಣೆಕ್​ ಶಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ತೆರೆದ ಜೀಪ್​ನಲ್ಲಿ ಪರೇಡ್​ ಪರಿವೀಕ್ಷಣೆ ಮಾಡಿ, ಗೌರವ ರಕ್ಷೆ ಸ್ವೀಕಾರ ಮಾಡಿದರು.

ಗೌರವ ರಕ್ಷೆ ಸ್ವೀಕಾರದ ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮುಖ್ಯಮಂತ್ರಿಗಳು ಮಾತನಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಭಾಷಣಕ್ಕೆ ಬುಲೆಟ್ ಪ್ರೂಫ್ ಗ್ಲಾಸ್ ಅಳವಡಿಸಲಾಗಿತ್ತು. ಅದನ್ನು ಗಮನಿಸಿದ ಮುಖ್ಯಮಂತ್ರಿಗಳು, ಬುಲೆಟ್ ಪ್ರೂಫ್ ಗ್ಲಾಸ್ ತೆರವು ಮಾಡುವಂತೆ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ  ಸೂಚನೆ ಮೇರೆಗೆ ಅಧಿಕಾರಿಗಳು ಕೂಡಲೇ ಬುಲೆಟ್ ಪ್ರೂಫ್ ಗ್ಲಾಸ್ ತೆಗೆದರು.

LEAVE A REPLY

Please enter your comment!
Please enter your name here