Home Uncategorized ಮಂಗಳೂರಿನಲ್ಲಿ ಹೋಳಿ ಹಬ್ಬಕ್ಕೆ ಅಡ್ಡಿಪಡಿಸಿದ ಆರು ಬಜರಂಗದಳ ಕಾರ್ಯಕರ್ತರ ಬಂಧನ

ಮಂಗಳೂರಿನಲ್ಲಿ ಹೋಳಿ ಹಬ್ಬಕ್ಕೆ ಅಡ್ಡಿಪಡಿಸಿದ ಆರು ಬಜರಂಗದಳ ಕಾರ್ಯಕರ್ತರ ಬಂಧನ

29
0

ಮಂಗಳೂರು ನಗರದ ಮರೋಳಿಯಲ್ಲಿ ನಡೆದ ಹೋಳಿ ಕೂಟಕ್ಕೆ ಅಡ್ಡಿಪಡಿಸಲು ಯತ್ನಿಸಿದ ಆರೋಪದ ಮೇಲೆ ಬಜರಂಗದಳದ ಆರು ಕಾರ್ಯಕರ್ತರನ್ನು ಮಂಗಳೂರು ನಗರ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ. ಮಂಗಳೂರು: ನಗರದ ಮರೋಳಿಯಲ್ಲಿ ನಡೆದ ಹೋಳಿ ಕೂಟಕ್ಕೆ ಅಡ್ಡಿಪಡಿಸಲು ಯತ್ನಿಸಿದ ಆರೋಪದ ಮೇಲೆ ಬಜರಂಗದಳದ ಆರು ಕಾರ್ಯಕರ್ತರನ್ನು ಮಂಗಳೂರು ನಗರ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.

ಪೊಲೀಸರ ತ್ವರಿತ ಮಧ್ಯಪ್ರವೇಶದಿಂದಾಗಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಆರು ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಸ್ಥಳದಲ್ಲಿ ಆಸ್ತಿಪಾಸ್ತಿಗೆ ಹಾನಿಯಾಗಿರುವ ಬಗ್ಗೆ ಪೊಲೀಸರು ಇನ್ನೂ ಯಾವುದೇ ದೂರನ್ನು ಸ್ವೀಕರಿಸಿಲ್ಲ ಮತ್ತು ತೊಂದರೆಯನ್ನು ಸೃಷ್ಟಿಸುವ ಹಿಂದಿನ ಉದ್ದೇಶದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಬಜರಂಗದಳದ ಕೆಲವು ಕಾರ್ಯಕರ್ತರು ಭಾನುವಾರ ಮರೋಳಿಯಲ್ಲಿ ಆಯೋಜಿಸಿದ್ದ ರಂಗ್ ದೇ ಬರ್ಸಾ’ ಹೋಳಿ ಕಾರ್ಯಕ್ರಮಕ್ಕೆ ನುಗ್ಗಿ ಆವರಣವನ್ನು ಧ್ವಂಸಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯುವಕರು ಮತ್ತು ಯುವತಿಯರು ಹೋಳಿ ಪಾರ್ಟಿಯನ್ನು ಆನಂದಿಸುತ್ತಿದ್ದರು. ಒಬ್ಬರ ಮೇಲೆ ಒಬ್ಬರು ಬಣ್ಣ ಎರಚುತ್ತಿದ್ದರು. ಆಗ ಬಲಪಂಥೀಯ ಸಂಘಟನೆಯ ಸದಸ್ಯರು ಅಲ್ಲಿನ ಯುವಕರು ಅಸಭ್ಯ ವರ್ತನೆಯನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು. ಅಲ್ಲದೇ ಅನ್ಯ ಧರ್ಮದ ಯುವಕರೂ ಸೇರಿ ಅಲ್ಲಿ ಹೋಳಿ ಆಚರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಆವರಣದಲ್ಲಿ ಹಾಕಲಾಗಿದ್ದ ಹೋಳಿ ಪಾರ್ಟಿಯ ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here