Home Uncategorized ಮಂಗಳೂರು: ಅನಧಿಕೃತವಾಗಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿ ಬಂಧನ

ಮಂಗಳೂರು: ಅನಧಿಕೃತವಾಗಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿ ಬಂಧನ

37
0

ಮಂಗಳೂರಿನಲ್ಲಿ ತನ್ನ ಬಾಡಿಗೆ ನಿವಾಸದಲ್ಲಿ ಅನುಮತಿಯಿಲ್ಲದೆ ಪಿಸ್ತೂಲ್ ಇಟ್ಟುಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಮಂಗಳೂರು: ಮಂಗಳೂರಿನಲ್ಲಿ ತನ್ನ ಬಾಡಿಗೆ ನಿವಾಸದಲ್ಲಿ ಅನುಮತಿಯಿಲ್ಲದೆ ಪಿಸ್ತೂಲ್ ಇಟ್ಟುಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಶಿಶಿರ್ ಎಂಬಾತನಿಂದ ವಶಪಡಿಸಿಕೊಂಡ ಪಿಸ್ತೂಲ್‌ನಲ್ಲಿ ಬುಲೆಟ್ ಕೂಡ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಶಿಶಿರ್ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಶಿಶಿರ್ ಬಳಿ ಪಿಸ್ತೂಲ್ ಇರುವ ಬಗ್ಗೆ ಮನೆ ಮಾಲೀಕರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

ಈ ವ್ಯಕ್ತಿ ಕಳೆದ ಐದು ತಿಂಗಳಿನಿಂದ ಅದೇ ಮನೆಯಲ್ಲಿ ವಾಸವಾಗಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಆಂಡ್ರ್ಯೂ ರಾಡ್ರಿಗಸ್ ಎಂಬ ಸ್ನೇಹಿತ ತನಗೆ ಪಿಸ್ತೂಲ್ ನೀಡಿದ್ದಾಗಿ ವಿಚಾರಣೆ ವೇಳೆ ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದಾನೆ.

2014ರಲ್ಲಿ ನಗರದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ರಾಡ್ರಿಗಸ್ ಆರೋಪಿಯಾಗಿದ್ದು, ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.

ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here