ತನ್ನ ಅಪ್ರಾಪ್ತ ಮಲ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಂಗಳೂರು: ತನ್ನ ಅಪ್ರಾಪ್ತ ಮಲ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಕುಂದಾಪುರ ಪೊಲೀಸರು ಪೊಕ್ಸೊ ಕಾಯ್ದೆಯಡಿ ಸೋಹೆಲ್ ಎಂಬಾತನನ್ನು ಬಂಧಿಸಿದ್ದಾರೆ.
ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪತಿಯನ್ನು ತೊರೆದು ತನ್ನ ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದ ಅನ್ಯ ರಾಜ್ಯದ ಮಹಿಳೆಯನ್ನು ಆರೋಪಿ ಮದುವೆಯಾಗಿದ್ದ. ಕುಟುಂಬ ಕುಂದಾಪುರದಲ್ಲಿ ನೆಲೆಸಿದೆ.
ಆರೋಪಿಯು ಮಹಿಳೆ ಮತ್ತು ಆಕೆಯ ಮತ್ತೊಬ್ಬ ಮಗಳನ್ನು ಕೊಠಡಿಯೊಂದರಲ್ಲಿ ಲಾಕ್ ಮಾಡಿ ನಂತರ ಸಂತ್ರಸ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂದು ಮೂಲಗಳು ತಿಳಿಸಿವೆ.
ಪೊಲೀಸರಿಗೆ ದೂರು ನೀಡಿದ ಮಹಿಳೆ ಮೇಲೂ ಆತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.