Home ಕರ್ನಾಟಕ ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಬಾಲಕ ವಶಕ್ಕೆ; ಪ್ರಕರಣ ದಾಖಲು

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಬಾಲಕ ವಶಕ್ಕೆ; ಪ್ರಕರಣ ದಾಖಲು

22
0

ಮಂಗಳೂರು, ಮೇ.8 ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಘಟನೆ ಬೆಳಕಿಗೆ ಬಂದಿದ್ದು, ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ 17 ವರ್ಷ ಪ್ರಾಯದ ಬಾಲಕನೊಬ್ಬನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿ ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿದ್ದು, ಸಿಸಿ ಕ್ಯಾಮರಾ ಆಧರಿಸಿ ಪರಿಶೀಲನೆ ನಡೆಸಿದಾಗ ಬಾಲಕನೊಬ್ಬ ಮೊಬೈಲ್ ಇಟ್ಟಿರುವುದು ಕಂಡು ಬಂದಿದೆ. ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆ ಮೊಬೈಲ್ ರಿಂಗಣಿಸಿದ್ದು, ತಕ್ಷಣ ಭದ್ರತಾ ಸಿಬ್ಬಂದಿಯು ಶೌಚಾಲಯವನ್ನು ಪರಿಶೀಲಿಸಿದಾಗ ಮೊಬೈಲ್ ಪತ್ತೆಯಾಗಿತ್ತು ಎನ್ನಲಾಗಿದೆ.

ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಬಾಲಕ ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದು ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here