Home Uncategorized ಮಂಗಳೂರು: ಗುಡ್ಡ ಕುಸಿದು ಮಹಿಳೆ ಸಜೀವ ಸಮಾಧಿ, ದುರಂತ  ಸ್ಥಳಕ್ಕೆ ದಿನೇಶ್ ಗುಂಡೂರಾವ್ ಭೇಟಿ

ಮಂಗಳೂರು: ಗುಡ್ಡ ಕುಸಿದು ಮಹಿಳೆ ಸಜೀವ ಸಮಾಧಿ, ದುರಂತ  ಸ್ಥಳಕ್ಕೆ ದಿನೇಶ್ ಗುಂಡೂರಾವ್ ಭೇಟಿ

37
0

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನಂದಾವರದಲ್ಲಿ ಮಣ್ಣು ಕುಸಿದು ಅವಶೇಷಗಳಡಿಯಲ್ಲಿ ಸಿಲುಕಿ ಮಹಿಳೆಯೊಬ್ಬರು ಜೀವಂತ ಸಮಾಧಿಯಾದ ಸ್ಥಳಕ್ಕೆ ಶನಿವಾರ ಭೇಟಿ ನೀಡಿದರು.ಶುಕ್ರವಾರ ಭಾರೀ ಮಳೆಯಿಂದ ಗುಡ್ಡ ಕುಸಿದು ಜರೀನಾ ಎಂಬ ಮಹಿಳೆ ಸಾವನ್ನಪ್ಪಿದ್ದರು.  ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನಂದಾವರದಲ್ಲಿ ಮಣ್ಣು ಕುಸಿದು ಅವಶೇಷಗಳಡಿಯಲ್ಲಿ ಸಿಲುಕಿ ಮಹಿಳೆಯೊಬ್ಬರು ಜೀವಂತ ಸಮಾಧಿಯಾದ ಸ್ಥಳಕ್ಕೆ ಶನಿವಾರ ಭೇಟಿ ನೀಡಿದರು.ಶುಕ್ರವಾರ ಭಾರೀ ಮಳೆಯಿಂದ ಗುಡ್ಡ ಕುಸಿದು ಜರೀನಾ ಎಂಬ ಮಹಿಳೆ ಸಾವನ್ನಪ್ಪಿದ್ದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರ ಈಗಾಗಲೇ ಕುಟುಂಬಕ್ಕೆ ಪರಿಹಾರವನ್ನು ನೀಡಿದ್ದು, ಗಾಯಗೊಂಡ ವ್ಯಕ್ತಿಯ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮೃತ ಮಹಿಳೆಯ ಮಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಈ ಭಾಗದಲ್ಲಿ ಇನ್ನೂ ಹಲವು ಮನೆಗಳು ಅಪಾಯದಂಚಿನಲ್ಲಿವೆ. ಮುಂದೆ ಈ ರೀತಿಯ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಸ್ಥಳದಲ್ಲಿ ತಡೆಗೋಡೆ ನಿರ್ಮಿಸಲು ಮುಂದಾಗಿದ್ದು,ಅದರ ಬಗ್ಗೆ ನೀಲನಕ್ಷೆಯನ್ನು ಸಲ್ಲಿಸಿ ಎಂದು  ಡಿಸಿಗೆ ಸೂಚಿಸಿದ್ದೇನೆ ಎಂದು ಹೇಳಿದರು. 

LEAVE A REPLY

Please enter your comment!
Please enter your name here