Home Uncategorized ಮಂಗಳೂರು: ದುಷ್ಕರ್ಮಿಗಳಿಂದ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

ಮಂಗಳೂರು: ದುಷ್ಕರ್ಮಿಗಳಿಂದ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

5
0

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಬಳಿ ಶನಿವಾರ ಸಂಜೆ ಚಾಕು ಇರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸುರತ್ಕಲ್:  ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಬಳಿ ಶನಿವಾರ ಸಂಜೆ ಚಾಕು ಇರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಮೃತ ವ್ಯಕ್ತಿಯನ್ನು ಕಾಟಿಪಳ್ಯದ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ. ನೈತಂಗಡಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರಿಗೆ ದುಷ್ಕರ್ಮಿಗಳ ಗುಂಪೊಂದು ಚಾಕು ಇರಿದು ಪರಾರಿಯಾಗಿತ್ತು. ನಂತರ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. 

LEAVE A REPLY

Please enter your comment!
Please enter your name here