ಅಪ್ರಾಪ್ತೆಗೆ ಕಿರುಕುಳ ನೀಡಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಸಾರ್ವಜನಿಕರು ಥಳಿಸಿದ್ದು, ಆತನನ್ನು ಶನಿವಾರ ಪೊಲೀಸರಿಗೆ ಒಪ್ಪಿಸಲಾಗಿದೆ ಮಂಗಳೂರು: ಅಪ್ರಾಪ್ತೆಗೆ ಕಿರುಕುಳ ನೀಡಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಸಾರ್ವಜನಿಕರು ಥಳಿಸಿದ್ದು, ಆತನನ್ನು ಶನಿವಾರ ಪೊಲೀಸರಿಗೆ ಒಪ್ಪಿಸಲಾಗಿದೆ.
ಆರೋಪಿಯನ್ನು ಉಳ್ಳಾಲ ನಿವಾಸಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಕಂಕನಾಡಿಯಲ್ಲಿ ಎಂಟು ವರ್ಷದ ಬಾಲಕಿ ಹಣ್ಣು ಕೀಳುತ್ತಿದ್ದಾಗ ಈ ಘಟನೆ ನಡೆದಿದೆ. ಸಮೀಪದಲ್ಲೇ ಕಲ್ಲು ಕಟ್ಟುವ ಕೆಲಸದಲ್ಲಿ ನಿರತರಾಗಿದ್ದ ಆರೋಪಿ ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಬಾಲಕಿಯ ಕಿರುಚಾಟ ಕೇಳಿ ಸ್ಥಳಕ್ಕೆ ಜಮಾಯಿಸಿದ ಸಾರ್ವಜನಿಕರು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಲಾಯಿತು.
ಆರೋಪಿಯನ್ನು ಬಂಧಿಸಿರುವ ಕಂಕನಾಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.